ರಾವೂರ: ಜೂ.28 ರಂದು ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ

ತಾಲೂಕು

ಚಿತ್ತಾಪುರ: ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂ.28 ರಂದು ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸಿದ್ದಲಿಂಗ ಬಾಳಿ ತಿಳಿಸಿದ್ದಾರೆ.

ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕನಿಷ್ಠ 5 ವಚನ ಮೇಲ್ಪಟ್ಟು ಹೇಳುವವರು ಭಾಗವಹಿಸಬೇಕು. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಹೇಳುವ ವಚನಗಳನ್ನು ಬರೆದು ತೀರ್ಪುಗಾರರಿಗೆ ಕೊಡಬೇಕು ಎಂದರು.

ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ವಿಜೇತರಿಗೆ ಜುಲೈ 2 ರಂದು ನಡೆಯುವ ಡಾ. ಫ.ಗು ಹಳಕಟ್ಟಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವು. ಆಸಕ್ತರು ಜೂ.27ರ ಒಳಗಾಗಿ 9590092113 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಹೆಸರು ನೋoದಾಯಿಸಬೇಕು ಎಂದು ಬಾಳಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *