ಚಿತ್ತಾಪುರ: ಕಾಳಸಂತೆಯಲ್ಲಿ ಮಾರಾಟ ಮಾಡಲು ಪಡಿತರ ಅಕ್ಕಿಯನ್ನು ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ಆಧರಿಸಿ ಪಿಎಸ್ಐ ಶ್ರೀಶೈಲ ಅಂಬಾಟಿ ಮತ್ತು ಸಿಬ್ಬಂದಿ ದಾಳಿ ಮಾಡಿ ಅಕ್ಕಿ ಸಹಿತ ವಾಹನ ಜಪ್ತಿ ಮಾಡಿದರು.
50 ಕೆ.ಜಿ ತೂಕದ 49 ಪ್ಲಾಸ್ಟಿಕ್ ಚೀಲಗಳಲ್ಲಿದ್ದ 83,300 ಮೌಲ್ಯದ 24 ಕ್ವಿಂಟಾಲ್ 50 ಕೆ.ಜಿ ಅಕ್ಕಿ ವಶಕ್ಕೆ ಪಡೆಯಲಾಗಿದೆ. ವಾಹನ ಜಪ್ತಿ ಮಾಡಿಕೊಂಡು ಹೈದರಾಬಾದ್ ಮೂಲಕ ಶಾಣುನಾಯಕ ಲಕ್ಷ್ಮಣನಾಯಕ ಹಾಗೂ ಮಶಾಕ ಸಲೀಂ ದಂಡೋತಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಫುಡ್ ಇನ್ಸ್ಪೆಕ್ಟರ್ ಮಹೇಶ್ ಅವರು ದೂರು ನೀಡಿದರು, ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು.
ಮರಳು ಸಾಗಿಸುತ್ತಿದ್ದ ಎರಡು ಟ್ರ್ಯಾಕ್ಟ ಜಪ್ತಿ
ತಾಲೂಕಿನ ಮುಡಬೂಳ ಗ್ರಾಮದ ಹತ್ತಿರ ಕಾಗಿಣಾ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದೆ ಎನ್ನುವ ಮಾಹಿತಿ ಆಧರಿಸಿ ದಾಳಿ ಮಾಡಿ ಮರಳು ತುಂಬಿದ ಎರಡು ಟ್ರ್ಯಾಕ್ಟರ್ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.