ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು ಸಂಪರ್ಕಿಸುವ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಯಾಗುತ್ತಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆಯನ್ನು ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸುಮಾರು 2.1 ಕಿಲೋಮೀಟರ್ ಉದ್ದವಿರುವ ಈ ಸೇತುವೆ ದೇಶದ ಎರನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿದೆ.
ಸಿಂಗದೂರು ಸೇತುವೆಯ ವಿಶೇಷತೆಗಳು ಮತ್ತು ಪ್ರಯೋಜನಗಳು
- 2.1 ಕಿಲೋಮೀಟರ್ ಉದ್ದ ಹಾಗೂ 16 ಮೀಟರ್ ಅಗಲ ಇದ್ದು, ಇದು ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ.
- ಕರ್ನಾಟಕದ ಅತಿ ದೊಡ್ಡ ಒಳನಾಡು ಸೇತುವೆಯಾಗಿದೆ.
- ಈ ಸೇತುವೆಯನ್ನು ಶರಾವತಿ ನದಿಯ ಭೋರ್ಗರೆವ ಪ್ರವಾಹವನ್ನು ತಡೆದುಕೊಳ್ಳುವ ಸಾಮರ್ಥ್ಯದೊಂದಿಗೆ ವಿನ್ಯಾಸಗೊಳಿಸಲಾಗಿದೆ.
- 423 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಇದಾಗಿದೆ.
- 2018ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಿಗಂದೂರು ಸೇತುವೆ ಕಾಮಗಾರಿಗೆ ಚಾಲನೆ ನೀಡಿದ್ದರು.
- 2020 ಡಿಸೆಂಬರ್‌ನಲ್ಲಿ ಕಾಮಗಾರಿ ಪ್ರಾರಂಭವಾಗಿತ್ತು. ಕೊರೊನಾ ಹಾಗೂ ಹೆಚ್ಚಿನ ಪ್ರಮಾಣದ ಹಿನ್ನೀರಿನ ಕಾರಣ.
- ಆರಂಭದ ಎರಡು ವರ್ಷ ನಿಧಾನವಾಗಿ ಸಾಗಿದ ಕಾಮಗಾರಿ ಕೆಲಸ ನಂತರ ವೇಗ ಪಡೆದಿತ್ತು.
- ಸಿಗಂದೂರು ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನು ಸುಮಾರು 2 ಗಂಟೆಗಷ್ಟು ಕಡಿಮೆ ಮಾಡಲಿದೆ.
- ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರು ತೆರಳಲು ನೆರವಾಗಲಿದೆ. ಪ್ರಾದೇಶಿಕ ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರವನ್ನು ಉತ್ತೇಜಿಸಲಿದೆ.
- ಈ ಸೇತುವೆಯು ಕರ್ನಾಟಕದ ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದೆ.
- ಈ ಸೇತುವೆಯು ಸಾಗರ ತಾಲೂಕಿನ ಅಂಬಾರಗೋಡ್ಲು ಮತ್ತು ಕಳಸವಳ್ಳಿ (ತುಮರಿ) ಗ್ರಾಮಗಳನ್ನು ಸಂಪರ್ಕಿಸಲಿದೆ.
- ಸೇತುವೆಯು, ಆರು ದಶಕಗಳಿಂದ ಸಂಚಾರದ ಮೂಲಭೂತ ಸೌಕರ್ಯಗಳನ್ನು ಕಾಣದೆ ಬದುಕುತ್ತಿದ್ದ ಶರಾವತಿ ಹಿನ್ನೀರು ಭಾಗದ 40ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ ಇತರ ಊರುಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ.
- ಸೇತುವೆ ನಿರ್ಮಾಣಕ್ಕೆ ಸುಮಾರು 60 ವರ್ಷಗಳಿಂದ ಹೋರಾಟ ನಡೆದಿತ್ತು. ಅಂತಿಮವಾಗಿ ಇದೀಗ ನನಸಾಗಿದೆ.