ಕನ್ನಡದ ಖ್ಯಾತ ನಿರೂಪಕಿ/ನಟಿ ಅನುಶ್ರೀ ಮದುವೆಯ ವದಂತಿ ಕಳೆದ ಕೆಲ ತಿಂಗಳಿಂದ ಜೋರಾಗಿತ್ತು. ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ ಎಂಬ ಮಾಹಿತಿ ಬಹುತೇಕ ಖಚಿತವಾಗಿದ್ದು ಆಗಸ್ಟ್ 28ಕ್ಕೆ ಮದುವೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕುಟುಂಬಸ್ಥರು ನೋಡಿದ ಹುಡುಗನ ಜೊತೆಗೆ ಅನುಶ್ರೀ ಮದುವೆಯಾಗುತ್ತಿದ್ದು ಮಂಗಳೂರು ಮೂಲದ ಬೆಂಗಳೂರಿನಲ್ಲಿ ನೆಲೆಸಿರುವ ಟೆಕ್ಕಿ ಜೊತೆಗೆ ಅನುಶ್ರೀ ಕಲ್ಯಾಣ ಎನ್ನಲಾಗುತ್ತಿದೆ. ಮದುವೆ ನಿಶ್ಚಯವಾಗಿರುವ ಹುಡುಗನ ಬಗ್ಗೆಯಾಗಲಿ, ಇನ್ನಿತರ ಮಾಹಿತಿ ಬಗ್ಗೆ ಅನುಶ್ರೀ ಗೌಪ್ಯವಾಗಿರಿಸಿದ್ದಾರೆ. ಆಗಸ್ಟ್ 28 ರಂದು ಬೆಂಗಳೂರಿನಲ್ಲಿ ಅದ್ದೂರಿ ಆರತಕ್ಷತೆಗೆ ಸ್ಥಳ ನಿಗದಿಯಾಗಿರುವ ಸುದ್ದಿ ಬಂದಿದೆ.
ಅನುಶ್ರೀ ಮದುವೆ ವಿಚಾರವಾಗಿ ಹಲವು ತಮಾಷೆಯ ಸಂಭಾಷಣೆಗಳು ನಡೆಯುತ್ತಲೇ ಇತ್ತು. ಮದುವೆ ಸುದ್ದಿ ಕೇಳ್ದಾಗೆಲ್ಲಾ ಈ ವರ್ಷವೇ ಮದುವೆ ಎಂದಿದ್ದರು ಅನುಶ್ರೀ. ಇದೀಗ ಮದುವೆಗೆ ಕಾಲ ಕೂಡಿಬಂದಿದ್ದು ಆಗಸ್ಟ್ 28ಕ್ಕೆ ಕಲ್ಯಾಣ ಎನ್ನಲಾಗುತ್ತಿದೆ. ಸರಳ ಶಾಸ್ತ್ರೋಕ್ತವಾಗಿ ಮದುವೆಯಾದ ಬಳಿಕ ಆಗಸ್ಟ್ 28ಕ್ಕೆ ಸಿನಿಮಾ ಇಂಡಿಸ್ಟ್ರಿಯವರನ್ನು ಆಮಂತ್ರಿಸಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳವ ಸಾಧ್ಯತೆ ಇದೆ.