ವಿಜಯನಗರ: ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಲತಾ ಮಲ್ಲಿಕಾರ್ಜುನ ಅವರ ಕಚೇರಿಯ ಬೀಗ ಮುರಿದ ಕಳ್ಳರು ಹಣ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿರುವುದು ಬೆಳಕಿಗೆ ಬಂದಿದೆ. ನಾಲ್ವರು ಮುಸುಕುದಾರಿಗಳು ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಲತಾ ಮಲ್ಲಿಕಾರ್ಜುನ ಅವರ ಶಾಸಕ ಕಚೇರಿಯ ಬೀಗ ಮುರಿದ ಒಳಗೆ ನುಗ್ಗಿದ್ದು.
2.5 ಲಕ್ಷ ನಗದು ಹಣ ಹಾಗೂ 10.80 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಬುಧವಾರ ಮಧ್ಯರಾತ್ರಿ ಒಂದು ಗಂಟೆಯಿಂದ ಗುರುವಾರ ನಸುಕಿನ ನಾಲ್ಕು ಗಂಟೆ ನಡುವೆ ಮುಸುಕು ದಾರಿಗಳು ಶಾಸಕರ ಕಚೇರಿಯನ್ನು ದೋಚಿದ್ದಾರೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಕಳ್ಳರ ಜಾಲ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಹರಪನಹಳ್ಳಿ ಡಿವೈಎಸ್ಪಿ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ತಂಡ ರಚನೆ ಮಾಡಲಾಗಿದೆ.