ಕಲಬುರಗಿ: ಮಕ್ಕಳನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿಸಿ, ಸಮಾಜದ ದೊಡ್ಡ ಆಸ್ತಿಯನ್ನಾಗಿಸಿ, ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ. ಎಂದು ಎಂದು ಚಿಂತಕ ನರಸಪ್ಪ ಬಿರಾದಾರ ದೇಗಾಂವ ಹೇಳಿದರು.
ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ‘ಸ್ವಾತಿ ಪ್ರೌಢಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ರವಿವಾರ ಜರುಗಿದ ‘ರಾಷ್ಟೀಯ ಪಾಲಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ತಮ್ಮ ಪಾಲಕ-ಪೋಷಕರ ಶ್ರಮ ಮರೆಯಬಾರದು. ಅವರ ಇಳಿ ವಯಸ್ಸಿನಲ್ಲಿ ಪಾಲಕರಿಗೆ ಆರೈಕೆ ಮಾಡಬೇಕು ಎಂದರು.
ಉಪನ್ಯಾಸಕ ಎಚ್.ಬಿ ಪಾಟೀಲ್ ಮಾತನಾಡಿ, ತನಗಾಗಿ ಏನನ್ನು ಪ್ರಾರ್ಥಿಸದ ತಾಯಿ, ತನಗಾಗಿ ಏನನ್ನು ಮಾಡಿಕೊಳ್ಳದ ತಂದೆ, ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹಗಲು-ರಾತ್ರಿಯೆನ್ನದೆ ಶ್ರಮಿಸುವ ಮುಗ್ದ ಜೀವಿಗಳು. ಮಗುವಿಗೆ ಶಿಕ್ಷಣ, ಸಂಸ್ಕಾರ, ಬುದ್ಧಿಯನ್ನು ನೀಡಿ, ವ್ಯಕ್ತಿಯನ್ನು ಶಕ್ತಿಯನ್ನಾಗಿಸುವಲ್ಲಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಾರೆ. ಮಕ್ಕಳು ತಮ್ಮ ಪಾಲಕರ ಮಾತುಗಳನ್ನು ಆಲಿಸಿ, ಮುನ್ನೆಡೆಯಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಸಾಲಿ, ಶಿಕ್ಷಕಿಯರಾದ ಪುರ್ಣಿಮಾ ಪಾಟೀಲ್, ಕಾಶಮ್ಮ, ಶಿಲ್ಪಾ ಎಸ್.ಕೆ, ಖಮರುನ್ನೀಸ್ ಬೇಗಂ, ಪ್ರೀತಿ ಆರ್.ಎಸ್, ಪ್ರೀತಿ, ಸರಸ್ವತಿ ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.