ಪಕ್ಷ ಅಧಿಕಾರಕ್ಕೆ ತರಲು 5 ವರ್ಷ ಕಷ್ಟ ಪಟ್ಟಿದ್ದು ನಾನು, ಕೃಷ್ಣ CM ಆದ್ರು: ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಮ ಮಾಡಿದಂತಾಯಿತು

ರಾಜ್ಯ

ವಿಜಯಪುರ: ಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪರೋಕ್ಷವಾಗಿ ನೋವು ತೋಡಿಕೊಂಡಿದ್ದಾರೆ.

ಬಿಎಲ್​​ಡಿ ಸಂಸ್ಥೆಯ ಸಂಸ್ಥಾಪಕ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ ಅದು ಕೈ ತಪ್ಪಿತು. 1999ರಲ್ಲಿ ಸಿಎಂ ಆಗೋದು ಕೈತಪ್ಪಿತು. ನಾನು ವಿಧಾನಸಭಾದ ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡಿದೆ. 4 ತಿಂಗಳ ಹಿಂದೆ ಪಕ್ಷ ಸೇರಿದ್ದ ಎಸ್.ಎಂ ಕೃಷ್ಣ ಮುಖ್ಯಮಂತ್ರಿ ಆದರು ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಪ್ರಯತ್ನಿಸಿದೆ, ಆದರೆ ಸಿಎಂ ಆಗಿದ್ದು ಎಸ್.ಎಂ ಕೃಷ್ಣಾ ಅವರು‌. ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಯಿತು. ಸ್ವಾಮಿಜಿಗಳೇ ನಾನು ಸೇವೆ ಸಲ್ಲಿಸಿದ್ದು ನೀರಲ್ಲಿ ಹೋಯಿತು ಎಂದು ಮತ್ತೊಮ್ಮೆ ಹೇಳಿದರು. ಬ್ಲಾಕ್ ಅಧ್ಯಕ್ಷನಿಂದ ಈಗ ಎಐಸಿಸಿ ಅಧ್ಯಕ್ಷನಾಗಿದ್ದೆನೆ. ಅಧಿಕಾರದ ಬೆನ್ನು ಹತ್ತಿ ನಾನು ಎಂದಿಗೂ ಹೋಗಲಿಲ್ಲ. ಅದರೆ ಅದುವೇ ನನ್ನ ಬಳಿಗೆ ಬಂದಿದೆ. ಪ್ರಯತ್ನದ ಫಲದಿಂದ ಸಿಕ್ಕಿದೆ ಎಂದು ಹೇಳಿದ್ದಾರೆ. ಬ್ಲಾಕ್ ಅಧ್ಯಕ್ಷನಿಂದ ಈಗ ಎಐಸಿಸಿ ಅಧ್ಯಕ್ಷನಾಗಿದ್ದೆನೆ. ಅಧಿಕಾರದ ಬೆನ್ನು ಹತ್ತಿ ಹೋಗಲಿಲ್ಲ. ಅದಾಗೇ ಸಿಕ್ಕಿದೆ ಎಂದಿದ್ದಾರೆ.

ರಜಾಕರ ಹಾವಳಿಯಲ್ಲಿ ನಮ್ಮ ಕುಟುಂಬ ಕಳೆದುಕೊಂಡೆ. ತಾಯಿ, ತಂಗಿ, ದೊಡ್ಡಪ್ಪ ಉಸಿರು ಚೆಲ್ಲಿದರು. ರಜಾಕರ ಹಾವಳಿ ಸಮಯದಲ್ಲಿ ಒಬ್ಬರನ್ನು ಒಬ್ಬರು ಮನೆಗೆ ಸೇರಿಸುತ್ತಿರಲಿಲ್ಲ. ನಮ್ಮ ತಂದೆ ನನ್ನನ್ನು ಬದುಕಿಸಲೆಂದು ಮಹಾರ್ ರೆಜಿಮೆಂಟ್​​ನಲ್ಲಿದ್ದ ಪುಣೆಯ ಚಿಕ್ಕಪ್ಪನ ಮನೆಗೆ ಕರೆತಂದರು. ಆದರೆ ಅಲ್ಲಿ ಸ್ವಾತಂತ್ರ್ಯ ಸಿಕ್ಕ ಬಳಿಕ ಅವರು ಅಲ್ಲಿಂದ ತೆರಳಿದರು. ಆಗ ನಾವು ಅನಿವಾರ್ಯವಾಗಿ ಗುಲ್ಬರ್ಗಾಕ್ಕೆ ಬಂದು ನೆಲೆಸಬೇಕಾಯಿತು ಎಂದು ಹೇಳಿದರು.

Leave a Reply

Your email address will not be published. Required fields are marked *