ಚಿತ್ತಾಪುರ: ಒಳ ಮೀಸಲಾತಿಗಾಗಿ ಆಗಸ್ಟ್ 1ರಂದು ಕಲಬುರಗಿ ನಗರದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಚಿತ್ತಾಪುರ ಮತ್ತು ವಾಡಿ ಪಟ್ಟಣದಿಂದ 3 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಮತ್ತು ಸಮಾಜದ ಹಿರಿಯ ಮುಖಂಡ ರಾಜು ಮುಕ್ಕಣ್ಣ ಹೇಳಿದರು.
ಈ ಬೃಹತ್ ಪ್ರತಿಭಟನೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. ಒಳ ಮೀಸಲಾತಿ ಜಾರಿಗಾಗಿ ಮಾದಿಗರು ಮೂರುವರೆ ದಶಕಗಳಿಂದ ಹೋರಾಟ ನಡೆಸುತ್ತಿದ್ದರು ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುತ್ತಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯನವರು ಮಾದಿಗರಲ್ಲಿ ಗೊಂದಲ ಸೃಷ್ಟಿಸುತ್ತ ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಆಗಸ್ಟ್ 1 ರಂದು ಕಲಬುರಗಿ ನಗರದಲ್ಲಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಪರಿಶಿಷ್ಟ ಜಾತಿಯಲ್ಲಿ ಒಳ ಮಿಸಲಾತಿ ಮೊದಲು ಅಧಿವೇಶನದಲ್ಲೆ ಜಾರಿ ತರುತ್ತೆನೆ ಎಂದು ಸುಳ್ಳು ಹೇಳುತ್ತಾ ಬಂದಿದ್ದಾರೆ ಎಂದು ಆಕೋಶ ವ್ಯಕ್ತಪಡಿಸಿದರು.
ಬೇರೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಿದೆ. ಆದರೆ ಕರ್ನಾಟಕ ಮಾತ್ರ ಜಾರಿ ಮಾಡುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇದನ್ನು ಖಂಡಿಸಿ ಕಲಬುರಗಿಯಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಯುವಕರು, ಸಮಾಜದ ಮುಖಂಡರು, ರಾಜಕೀಯ ನಾಯಕರು ಸೇರಿದಂತೆ ಎಲ್ಲರೂ ಪಕ್ಷಾತೀತವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.