Site icon ಸುದ್ದಿ ಸಂಗ್ರಹ

6 ಜನರಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ಮೂವರು ಕಾಮುಕರ ಬಂಧನ

ಕೋಲಾರ: ಬಾಲಕಿಯೊಬ್ಬಳ ಮೇಲೆ ನಿರಂತರ ಪ್ರತ್ಯೇಕವಾಗಿ 6 ಜನ ಅತ್ಯಾಚಾರವೆಸಗಿರುವುದು ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ರಾಹುಲ್, ನಾಗೇಶ್ ಮತ್ತು ಪುನೀತ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಚೇತನ್, ಕಿರಣ್, ಮಹೇಂದ್ರಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಬಾಲಕಿ ನೀಡಿದ ಹೇಳಿಕೆ ಆಧರಿಸಿ 6 ಜನರ ವಿರುದ್ದ ಜು.18 ರಂದು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Exit mobile version