ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ: ಅಭಿಮಾನಿಗಳಿಂದ ತೀವ್ರ ಆಕ್ರೋಶ

ರಾಜ್ಯ

ಬೆಂಗಳೂರು: ಅಭಿಮಾನಿಗಳ ವಿರೋಧದ ನಡುವೆಯೂ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ ಮತ್ತು ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

35 ವರ್ಷಗಳ ಕಲಾಸೇವೆ ಮತ್ತು 200 ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದ ಡಾ.ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು. ನಂತರದಲ್ಲಿ ವಿಷ್ಣು ಸಮಾಧಿಯನ್ನು ಸಂರಕ್ಷಿಸಿ, ಅದನ್ನು ಸ್ಮಾರಕವಾಗಿ ಘೋಷಿಸಬೇಕೆಂಬ ಹೋರಾಟ ನಡೆಯುತ್ತಿರುವಾಗ ಇತ್ತು. ಆದರೆ ಹೈಕೋರ್ಟ್‌ ಸೂಚನೆ ಮೇರೆಗೆ ರಾತ್ರೋರಾತ್ರಿ ಸಮಾಧಿಯನ್ನು ತೆರವುಗೊಳಿಸಲಾಗಿದೆ.

ಮೈಸೂರಿನಲ್ಲುಂಟು ವಿಷ್ಣು ಸ್ಮಾರಕ
ಮೈಸೂರಿನಲ್ಲಿ ಈಗಾಗಲೇ ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಆಗಿದೆ. ವಿಷ್ಣು ಸಿನಿಮಾದಲ್ಲಿನ ಪ್ರಶಸ್ತಿಗಳು ಸ್ಮಾರಕದ ಮ್ಯೂಸಿಯಂನಲ್ಲಿದೆ. ವಿಶೇಷವಾದ ವಿಷ್ಣು ಪುತ್ಥಳಿಯನ್ನು ನಿರ್ಮಿಸಲಾಗಿದೆ. ನಟನ ಚಲನಚಿತ್ರ ಪ್ರಯಾಣದ ಗ್ಯಾಲರಿ, ವಿಷ್ಣು ಅವರ ಅಪರೂಪದ 600ಕ್ಕೂ ಹೆಚ್ಚು ಫೋಟೋಗಳು, ವಿಷ್ಣು ಬಳಸುತ್ತಿದ್ದ ವಸ್ತುಗಳು, ಬಟ್ಟೆ ಇಲ್ಲಿ ನೋಡಬಹುದಾಗಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ವಿಷ್ಣುವರ್ಧನ್ ಸ್ಮಾರಕಕ್ಕೆ ಸೆಪ್ಟೆಂಬರ್ 15, 2020 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ವಿಷ್ಣು ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಮಾಡಲಾಗಿದೆ. ಆಡಿಟೋರಿಯಂ ಕೂಡ ಇಲ್ಲಿ ನಿರ್ಮಿಸಲಾಗಿದೆ.

Leave a Reply

Your email address will not be published. Required fields are marked *