ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು – ಬೆಳಗಾವಿ ನಡುವಿನ ವಂದೆ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ.
ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ ಅವರು 4 ಗಂಟೆಗಳ ಕಾಲ ಇರಲಿದ್ದು, ಈ ವೇಳೆ 3 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10.30ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್‌ಆರ್ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು- ಬೆಳಗಾವಿ ನಡುವೆ ವಂದೆ ಭಾರತ್ ಟ್ರೈನ್’ಗೆ ಚಾಲನೆ ನೀಡಲಿದ್ದಾರೆ. ಇದೆ ವೇಳೆ ವರ್ಚುವಲ್ ಆಗಿ ಅಮೃತ್ಸರ್- ಶ್ರೀ ಮತಾ ವೈಷ್ಣೋದೇವಿ ಕತ್ರಿ ಹಾಗೂ ಅಜ್ನಿ (ನಾಗಪುರ್)- ಪುಣೆಯ ಮತ್ತೆರಡು ವಂದೆ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.
ಬಳಿಕ ರಸ್ತೆ ಮಾರ್ಗದ ಮೂಲಕ ಆರ್ವಿ ರಸ್ತೆ (ರಾಗಿಗುಡ್ಡ) ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11.45 ರಿಂದ 12.50ರ ನಡುವೆ ಹಳದಿ ಮಾರ್ಗ ಲೋಕಾರ್ಪಣೆ ಮಾಡಿ, ಎಲೆಕ್ಟ್ರಾನಿಕ್ ಸಿಟಿ ಸ್ಟೇಷನ್ವರೆಗೆ ಮೆಟ್ರೋ ಪ್ರಯಾಣ ನಡೆಸಲಿದ್ದಾರೆ. 19.15 ಕಿ.ಮೀ ಉದ್ದದ ಆರ್ವಿ ರಸ್ತೆಯಿಂದ ಬೊಮ್ಮಸಂದ್ರ ಸಾಗಲಿರುವ ಹಳದಿ ಮೆಟ್ರೋ ಮಾರ್ಗದಲ್ಲಿ 16 ಸ್ಟೇಷನ್ ಬರಲಿದ್ದು, ಇದನ್ನು 5,056.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
ಇದಾದ ಬಳಿಕ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಬೆಂಗಳೂರಿಗೆ ಆಗಮಿಸಿಲಿದ್ದು, ಇಲ್ಲಿ ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕು ಸ್ಥಾಪನೆ ನೀಡಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಹೆಚ್ಎಎಲ್ಗೆ ತೆರಳಿ, 2.45ಕ್ಕೆ ದೆಹಲಿಯತ್ತ ಪ್ರಯಾಣ ಬೆಳಸಲಿದ್ದಾರೆ. ಮೆಟ್ರೋ 3ಹಂತದ ಯೋಜನೆ ಆರೇಂಜ್ ಲೈನ್ (ಕಿತ್ತಾಳೆ ಮಾರ್ಗ) ಆಗಿದ್ದು, ಇದು 44.65 ಕಿ.ಮೀ ದೂರ ಹೊಂದಿದ್ದು, ಇದನ್ನು ಅಂದಾಜು 15.611 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕೂ ಕೂಡ ಮೋದಿ ಶಂಕು ಸ್ಥಾಪನೆ ನಡೆಸಲಿದ್ದಾರೆ.
ಹಳದಿ ಲೈನ್ ಮೆಟ್ರೋ ನಿಲ್ದಾಣ ಉದ್ಘಾಟನೆ ಹಿನ್ನೆಲೆ ಈ ಮಾರ್ಗದಲ್ಲಿ ಟ್ರಾಫಿಕ್ ದಟ್ಟಣೆ ಇರಲಿದ್ದು, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಜಂಕ್ಷನ್ನಲ್ಲಿ ಪ್ರಯಾಣಿಕರ ಸಂಚಾರ ದಟ್ಟಣೆ ಉಂಟಾಗಲಿದೆ.
ಮೋದಿ ವೇಳಾಪಟ್ಟಿ
- 10 ಆಗಸ್ಟ್, ಬೆಳಗ್ಗೆ 7.50ಕ್ಕೆ ನವದೆಹಲಿಯಿಂದ ಹೊರಡಲಿರುವ ನರೇಂದ್ರ ಮೋದಿ.
- ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್’ಎಎಲ್ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್
- ಬೆಳಗ್ಗೆ 10.35ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಟೇಕಾಫ್
- ಬೆಳಗ್ಗೆ 10.55ಕ್ಕೆ ಮೇಖ್ರಿ ಸರ್ಕಲ್‌ನ ಹೆಚ್ ಕ್ಯೂಟಿಸಿ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್
- ಬೆಳಗ್ಗೆ 11 ಗಂಟೆಗೆ ಹೆಚ್ ಕ್ಯೂ ಟಿಸಿ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಕೆಎಸ್‌ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ.
- ಮಾರ್ಗ ಮಧ್ಯೆ ಮೇಖ್ರಿ ವೃತ್ತ, ಚಾಲುಕ್ಯ ವೃತ್ತ ಮತ್ತು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿಗೆ ಸ್ವಾಗತ.
- ಬೆಳಗ್ಗೆ 11.10ಕ್ಕೆ ಕೆಎಸ್‌ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಧಾನಿ ಆಗಮನ.
- ಬೆಳಗ್ಗೆ 11.15ರಿಂದ 11.20ರವರೆಗೆ ಕೆಎಸ್‌ಆರ್ ರೈಲ್ವೆ ನಿಲ್ದಾಣದಲ್ಲಿ 3 ವಂದೆ ಮಾತರಂ ರೈಲುಗಳಿಗೆ ಚಾಲನೆ.
- ಬೆಳಗ್ಗೆ 11.25ಕ್ಕೆ ಕೆಎಸ್‌ಆರ್ ರೈಲ್ವೆ ನಿಲ್ದಾಣದಿಂದ ಪ್ರಧಾನಿ ನಿರ್ಗಮನ
- ರಸ್ತೆ ಮಾರ್ಗವಾಗಿ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಮೋದಿ ಪ್ರಯಾಣ.
- ಮಾರ್ಗ ಮಧ್ಯೆ ಸಂಗೊಳ್ಳಿ ರಾಯಣ್ಣ ವೃತ್ತ, ಸೌತ್ ಎಂಡ್ ವೃತ್ತ ಮತ್ತು ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಪ್ರಧಾನಿಗೆ ಬಿಜೆಪಿ ಕಾರ್ಯಕರ್ತರ ಸ್ವಾಗತ.
- ಬೆಳಗ್ಗೆ 11.45ಕ್ಕೆ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮನ.
- ಬೆಳಗ್ಗೆ 11.45ರಿಂದ ಮಧ್ಯಾಹ್ನ 12.50ರವರೆಗೆ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ
- ಮಧ್ಯಾಹ್ನ 12.50ಕ್ಕೆ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಕ್ಕೆ ಆಗಮನ.
- ಮಧ್ಯಾಹ್ನ 12.55ಕ್ಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಐಐಐಟಿ ಸಭಾಂಗಣಕ್ಕೆ ಆಗಮನ.
- ಮಧ್ಯಾಹ್ನ 1 ಗಂಟೆಗೆ ಸಭಾ ಕಾರ್ಯಕ್ರಮದ ವೇದಿಕೆಗೆ ಪ್ರಧಾನಿ ಆಗಮನ.
- ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಐಐಐಟಿ ಆಡಿಟೋರಿಯಂನಲ್ಲಿ ಸಭಾ ಕಾರ್ಯಕ್ರಮ
- ಮಧ್ಯಾಹ್ನ 1.25ಕ್ಕೆ ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಹಳದಿ ಮಾರ್ಗ ಉದ್ಘಾಟನೆ ಮತ್ತು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ.
- ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಪ್ರಧಾನಿ ಮೋದಿ ಭಾಷಣ.
- ಮಧ್ಯಾಹ್ನ 2.05ಕ್ಕೆ ಕಾರ್ಯಕ್ರಮದ ವೇದಿಕೆಯಿಂದ ಪ್ರಧಾನಿ ನಿರ್ಗಮನ
- ಮಧ್ಯಾಹ್ನ 2.15ಕ್ಕೆ ರಸ್ತೆ ಮಾರ್ಗವಾಗಿ ಹೆಲಿಪ್ಯಾಡ್ ಗೆ ಆಗಮನ
- ಮಧ್ಯಾಹ್ನ 2.20ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್‌ಎಎಲ್ ಏರ್ ಪೋರ್ಟ್ ಗೆ ನಿರ್ಗಮನ
- ಮಧ್ಯಾಹ್ನ 2.40ಕ್ಕೆ ಹೆಚ್ ಎಎಲ್ ಏರ್ ಪೋರ್ಟ್ ನಿಂದ ನವದೆಹಲಿಗೆ ಪ್ರಧಾನಿ ನರೇಂದ್ರ ಮೋದಿ ನಿರ್ಗಮನ.