ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಅರಜಂಬಗಾ ಗ್ರಾಮ ಘಟಕದ ಅಧ್ಯಕ್ಷರಾಗಿ ಲಾಲ್ ಪಟೇಲ್ ತಂದೆ ಮಕಬೂಲ್ ಪಟೇಲ್ ಅವರನ್ನು ನೇಮಕ ಮಾಡಲಾಯಿತು.
ನಗರದ ಒಕ್ಸ್ ಎಲೈಟ್ ಹೋಟೆಲ್’ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಾಸಿಕ ಸಭೆಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಕಾಶಿ ಮತ್ತು ಕರವೇ ಜಿಲ್ಲಾಧ್ಯಕ್ಷ ಆನಂದ್ ದೊಡ್ಮನಿ ಅವರು ಕಾಳಗಿ ತಾಲೂಕಿನ ಅರಂಬಗಾ ಗ್ರಾಮ ಘಟಕದ ಅಧ್ಯಕ್ಷರನ್ನು ನೇಮಕ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ತಾಲೂಕು ಅಧ್ಯಕ್ಷರು, ಗ್ರಾಮ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.