ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ
ಹತ್ತಿರದ ಕಾಗಿಣಾ ನದಿಗೆ ಕಟ್ಟಿರುವ ಸೇತುವೆ ಮೇಲಿನ ರಸ್ತೆ ಪ್ರವಾಹದಲ್ಲಿ ಕಿತ್ತು ಹೋಗಿದೆ.
ಸೇತುವೆ ಮೇಲಿನ ಡಾಂಬರ್ ರಸ್ತೆ ಮತ್ತು ಸಿಮೆಂಟ್ ಕಾಂಕ್ರಿಟ್ ರಸ್ತೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ. ಗುರುವಾರ ದಿನವಿಡಿ ಪ್ರವಾಹದಲ್ಲಿ ಸೇತುವೆ ಮುಳುಗಿತ್ತು. ಶುಕ್ರವಾರ ಬೆಳಿಗ್ಗೆ ಪ್ರವಾಹ ಕಡಿಮೆಯಾದಾಗ ಸೇತುವೆ ಮೇಲಿನ ರಸ್ತೆ ಕಿತ್ತು ಹೋಗಿರುವುದು ಬೆಳಕಿಗೆ ಬಂದಿದೆ.
ಸೇತುವೆ ಮೇಲಿನ ಅನೇಕ ಸಿಮೆಂಟ್ ಕಂಬಗಳು ಕೊಚ್ಚಿಕೊಂಡು ಹೋಗಿವೆ. ಸೇತುವೆ ಮೇಲೆ ಅಳವಡಿಸಿದ ಮೊಬೈಲ್ ನೆಟ್‌ವರ್ಕ್ ಮತ್ತು ಕೇಬಲ್ ಕಿತ್ತು ಹೋಗಿದೆ.
ಸೇತುವೆ ಹದಗೆಟ್ಟಿರುವದರಿಂದ ದಂಡೋತಿ ಸೇತುವೆ ಮಾರ್ಗವಾಗಿ ಕಲಬುರಗಿ, ಸೇಡಂಗೆ ನಿತ್ಯ ಸಂಚರಿಸುತ್ತಿದ್ದ ಬಸ್‌ಗಳು ಶಹಾಬಾದ ಮತ್ತು ಮಳಖೇಡ ಮಾರ್ಗವಾಗಿ ಸಂಚರಿಸುತ್ತಿವೆ.