ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆ ಅಪಾರ: ಎಚ್.ಬಿ ಪಾಟೀಲ

ನಗರದ

ಕಲಬುರಗಿ: ಭಾರತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಪಾದಾರ್ಪಣೆ ಮಾಡುವುದು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರವಾದ ಸಾಧನೆ ಮಾಡುತ್ತಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.

ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹವಾದ ಚಂದ್ರ, ಚಂದ್ರನಲ್ಲಿರುವ ವಾತಾವರಣ ಸೇರಿದಂತೆ ಅಲ್ಲಿನ ಮಾಹಿತಿಯ ಬಗ್ಗೆ ವ್ಯಾಪಕವಾಗಿ ಸಂಶೋಧನೆ ಜರುಗುತ್ತಿದೆ ಎಂದರು.

ಭಾರತದ ಚಂದ್ರಯಾನ ಯೋಜನೆ ಚಂದ್ರನನ್ನು ಸ್ಪರ್ಷಿಸುವುದು ಮಾತ್ರವಲ್ಲ. ಚಂದ್ರನಲ್ಲಿ ಕಂಡುಬರುವ ಭೌಗೋಳಿಕ ಲಕ್ಷಣಗಳು ಸೇರಿದಂತೆ ಸಮಗ್ರವಾದ ಅಧ್ಯಯನವಾಗಿದೆ. ಬಾಹ್ಯಾಕಾಶ ಯೋಜನೆಗಳು ಜನರ ಜೀವನದ ಮಟ್ಟವನ್ನು ಸುಧಾರಿಸುವಲ್ಲಿ ಪೂರಕವಾಗಿವೆ. ಹವಾಮಾನ ಮೂನ್ಸೂಚನೆ, ದೂರವಾಣಿ ಕರೆ, ಮಾಹಿತಿ ಪ್ರಸಾರ, ಇಂಟರನೆಟ್ ಸಂಪರ್ಕ, ನೈಸರ್ಗಿ ಆಪತ್ತುಗಳ ಸೂಚನೆ, ಹವಾಮಾನ ವರದಿ ಸೇರಿದಂತೆ ಇನ್ನಿತರ ಪ್ರಮುಖ ಸಂಗತಿಗಳ ಬಗ್ಗೆ ಮಾಹಿತಿ ಒದಗಿಸುತ್ತವೆ. ಯುವಕರು ವಿಜ್ಞಾನ ಮತ್ತು ತಂತ್ರಜ್ಞಾನದತ್ತ ಚಿತ್ತಹರಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರಾವಿಪ ಗ್ರಾಮೀಣ ಘಟಕದ ಮಾಜಿ ಸಂಚಾಲಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಾಲೆಯ ಮುಖ್ಯ ಶಿಕ್ಷಕಿ ಚಂಪಾಕಲಾ ನೆಲ್ಲೂರೆ, ಶಿಕ್ಷಕಿಯರಾದ ಗೀತಾಂಜಲಿ ಹಡಪದ, ಮಂಜುಳಾ ನರೋಣಾ, ಸೇವಕಿ ಸಿದ್ದಮ್ಮ ಕೌಂಟೆ ಮತ್ತು ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *