ಸುದ್ದಿ ಸಂಗ್ರಹ ಚಿತ್ತಾಪುರ
ತಾಲೂಕಿನ ಬಳವಡಗಿ ಗ್ರಾಮದಲ್ಲಿ ಅತಿ ಹೆಚ್ಚು ಮಳೆಯಾದ ಪರಿಣಾಮ ಗ್ರಾಮದ ಕೆಲಭಾಗ ಜಲಾವೃತಗೊಂಡಿತ್ತು, ಕೂಡಲೇ ಕಲಬುರಗಿ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 20 ಜನರ ರಕ್ಷಣೆ ಮಾಡಿದರು.
ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ನೇತೃತ್ವದಲ್ಲಿ ಎಸ್‌ಎಸ್‌ಓ ಆಂಜನೇಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಾದ ಸತೀಶ ಎಲ್.ಎಫ್, ನೈಮೋದಿನ್, ಗಬ್ಬರ್ ಸಿಂಗ್, ಶಂಕರ ಲಿಂಗ, ಮಲ್ಲಪ್ಪ, ಅಮಿತ, ಬಸವರಾಜ, ಶಂಭುಲಿಂಗಪ್ಪ ಮತ್ತು ರಾಮಾಜಿ ರಕ್ಷಣಾ ಕಾರ್ಯದಲ್ಲಿ ತೊಡಗಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದರು.
ಗ್ರಾಮದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದರು. ಯಾವುದೆ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.