ಹಾಟ್ ಏರ್ ಬಲೂನ್ ಹಾರುವ ಮುನ್ನವೆ ಬೆಂಕಿ: ಮಧ್ಯಪ್ರದೇಶ ಸಿಎಂ ಬಚಾವ್

ಸುದ್ದಿ ಸಂಗ್ರಹ

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಿಗ್ಗೆ (ಸೆ.13) ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೆ ಎಂಜಿನ್‌ನ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೆ ಭದ್ರತಾ ಸಿಬ್ಬಂದಿ ಅವರನ್ನು ಕೆಳಗಿಳಿಸಿ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಹಾಟ್ ಏರ್‌ ಬಲೂನ್‌ ಹಾರಾಟದಲ್ಲಿದ್ದಾಗ ಬೆಂಕಿ ಹೊತ್ತಿಕೊಂಡಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್‌ ನೆಲದಲ್ಲಿದ್ದಾಗ ಈ ಅವಘಡ ಸಂಭವಿಸಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವೀಡಿಯೋದಲ್ಲಿ ಮೋಹನ್ ಯಾದವ್ ಅವರು ಹಾಟ್‌ ಏರ್‌ ಬಲೂನ್‌ನಲ್ಲಿದ್ದಾಗ ಎಂಜಿನ್‌ನಿಂದ ಬೆಂಕಿಯ ಜ್ವಾಲೆ ಹೊರಹೊಮ್ಮುತ್ತಿರುವುದು ಕಾಣಿಸುತ್ತದೆ. ತಕ್ಷಣ ಹಾಟ್‌ ಏರ್‌ ಬಲೂನ್‌ನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಬೆಂಕಿ ನಂದಿಸಲಾಗಿದೆ. ಈ ಅವಘಡದಲ್ಲಿ ಯಾರಿಗೂ ಯಾವುದೆ ಅಪಾಯವಾಗಿಲ್ಲ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *