ಯಾವುದೆ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವದಿಲ್ಲ: ಕೆ.ಹೆಚ್ ಮುನಿಯಪ್ಪ

ರಾಜ್ಯ

ಬೆಂಗಳೂರು: ಯಾವುದೆ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡುವದಿಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೆವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿದ ಅವರು, ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್‌ಗೆ ವರ್ಗಾವಣೆ ಮಾಡುತ್ತೆವೆ. ಹೊರತು ಯಾವ ಕಾರ್ಡನ್ನು ರದ್ದು ಮಾಡುವುದಿಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೆವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೆವೆ ಎಂದು ತಿಳಿಸಿದ್ದಾರೆ.

ಯಾದಗಿರಿಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ವಿಚಾರವಾಗಿ ಮಾತನಾಡಿ, ಪ್ರಕರಣವನ್ನು ವಿವರವಾಗಿ ತನಿಖೆ ನಡೆಸಬೇಕು. ದೊಡ್ಡಮಟ್ಟದಲ್ಲಿ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸುತ್ತಾರೆ. ಯಾರೆ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

Leave a Reply

Your email address will not be published. Required fields are marked *