ಬೆಂಗಳೂರು: ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ಸಿಕ್ಕಿದೆ. ಸರ್ಕಾರಿ ನೌಕರರು ಮತ್ತು ಕುಟುಂಬದ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ.
ಅಕ್ಟೋಬರ್ 1 ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರಲಿದೆ. ಬಹಳ ವರ್ಷಗಳಿಂದ ಈ ಯೋಜನೆ ಮರುಜಾರಿಗೆ ಒತ್ತಾಯ ಕೇಳಿಬಂದಿತ್ತು.
ಈ ಯೋಜನೆಯಡಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸಿಗಲಿದೆ. ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿಯೂ ನಗದು ರಹಿತ ಉಚಿತ ಚಿಕಿತ್ಸೆ ಸಿಗಲಿದೆ.