ಸುದ್ದಿ ಸಂಗ್ರಹ ಶಹಬಾದ
ಸಮಾಜದಲ್ಲಿ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಪರಿವರ್ತಿಸಲು ಸಾಧ್ಯ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹನುಮಂತಪ್ಪ ಬಿ ಸೇಡಂಕರ ಹೇಳಿದರು.
ನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಂದು ತೆಗೆದುಕೊಳ್ಳುವ ನಿರ್ಧಾರ, ನಾಳೆ ಸಮಾಜ ಪರಿವರ್ತಿಸುವ ಶಕ್ತಿ ಹೊಂದಿದೆ. ಸೇವಾ ಮನೋಭಾವವು ಬದುಕನ್ನು ಶ್ರೀಮಂತಗೊಳಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಸವರಾಜ ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶ್ರಮದ ಮಹತ್ವ, ಶಿಸ್ತು, ನಾಯಕತ್ವ ಗುಣಗಳು ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸುವುದು ಎಂದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಇಂಗ್ಲಿಷ್ ವಿಭಾಗದ ಡಾ.ಗಂಗಾದರ ಸ್ಥಾಮರಮಠ, ಗ್ರಂಥಪಾಲಕ ನಾಗರಾಜ ದೇವತ್ಕಲ್, ಎನ್’ಎಸ್’ಎಸ್ ಅಧಿಕಾರಿ ಡಾ. ಲಕ್ಷ್ಮಣ ಟಿ ಮತ್ತು ಬೋಧಕ–ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ–ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು
ಕಾರ್ಯಕ್ರಮವನ್ನು ಜ್ಯೋತಿ ಗಂಟಿಮಠ ಸ್ವಾಗತಿಸಿದರು, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸುರೇಖ ನಿರೂಪಿಸಿದರು, ಗೌರಾದೇವಿ ಶೇರಿ ವಂದಿಸಿದರು.
.