ಕಲಬುರಗಿ: ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ‘ವಿಶ್ವ ರೇಬಿಸ್ ದಿನಾಚರಣೆ’ ಜರುಗಿತು.
ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಮಾತನಾಡಿ, ರೇಬಿಸ್ ಕಾಯಿಲೆಯು ಪ್ರಾಣಿಗಳಿಂದ ಮಾನವರಿಗೆ ಬರುವ ಕಾಯಿಲೆಯಾಗಿದೆ. ಜ್ವರ, ಆಯಾಸ, ತುರಿಕೆ, ಕೆಮ್ಮು, ಗಂಟಲು ನೋವು, ನರಗಳಲ್ಲಿ ನೋವು, ವಾಂತಿ ಇವು ಕಾಯಿಲೆಯ ಲಕ್ಷಣಗಳಾಗಿವೆ. ಇದು ತೊಂದರೆ ಉಂಟುಮಾಡುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು ಮತ್ತು ಮುಂಜಾಗ್ರತೆ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ರೇಶ್ಮಾ ನಕ್ಕುಂದಿ, ಜಗನಾಥ ಗುತ್ತೇದಾರ, ನಾಗೇಶ್ವರಿ ಮುಗಳಿವಾಡಿ, ಮಂಗಲಾ ಚಂದಾಪುರೆ, ನಾಗಮ್ಮ ಚಿಂಚೋಳಿ ಸೇರಿದಂತೆ ಅನೇಕರು ಇದ್ದರು.