ವಾಡಿ: ಬಿಜೆಪಿ ಕಛೇರಿಯಲ್ಲಿ 126ನೇ ಮನ್ ಕಿ ಬಾತ್ ವೀಕ್ಷಣೆ

ಪಟ್ಟಣ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 126ನೇ ಮನ್ ಕಿ ಬಾತ್ ಕಾರ್ಯಕ್ರಮ ಮುಖಂಡರು ವಿಕ್ಷೀಸಿದರು.

ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಮೋದಿ ಅವರ ಮನ್ ಕಿ ಬಾತ್ ನಲ್ಲಿ ಭಗತ್ ಸಿಂಗ, ಎಸ್.ಎಲ್ ಭೈರಪ್ಪನವರ ಬಗ್ಗೆ ಯುವಕರು ಹೆಚ್ಚಾಗಿ ಅರಿತು ದೇಶಾಭಿಮಾನ ಮೈಗೂಡಿಸಿಕೊಳ್ಳುವಂತ ಅನೇಕ ವಿಷಯಗಳು ಮನ್ ಕಿ ಬಾತ್ ಮುಖಾಂತರ ನಮಗೆ ಧಾರೆಯೆರೆಯುತ್ತಿರುವುದು ನಮ್ಮ ದೇಶ ಸೇವೆಗೆ ಇನ್ನಷ್ಟು ಸ್ಪೂರ್ತಿ ಸಿಗುವಂತಾಗಿದೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜೀರೊಳ್ಳಿ, ಎಸ್.ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಯುವ ಮೂರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಮುಖಂಡರಾದ ಅರ್ಜುನ ಕಾಳೆಕರ್, ಕಿಶನ ಜಾಧವ, ಕಾಶಿನಾಥ ಶೆಟಗಾರ, ಅಯ್ಯಣ್ಣ ದಂಡೋತಿ, ರವಿ ಚವ್ಹಾಣ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *