ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ.
ಪುತ್ರ ಪ್ರಿಯಾಂಕ್ ಖರ್ಗೆ ಹೇಳಿದ್ದೆನು ?
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆಗೆ ವೈದ್ಯರು ಸೂಚಿಸಿದ್ದಾರೆ. ಅದಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ, ಚೆನ್ನಾಗಿದ್ದಾರೆ. ನಿಮ್ಮೆಲ್ಲರ ಕಾಳಜಿ ಮತ್ತು ಹಾರೈಕೆಗೆ ಧನ್ಯವಾದಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ (ಟ್ವೀಟ್) ಮೂಲಕ ಮಾಹಿತಿ ನೀಡಿದ್ದಾರೆ.
ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.