ಕಲಬುರಗಿ: ಉತ್ತರ ಪ್ರದೇಶದ ಕಾನಪುರನಲ್ಲಿ ಆರಂಭವಾದ ಐ ಲವ್ ಮೊಹಮ್ಮದ್ ಬ್ಯಾನರ್ ಸಾಕಷ್ಟು ವಿವಾದ ಸೃಷ್ಟಿಸಿದ್ದು, ಇದೀಗ ಈ ಐ ಲವ್ ಮೊಹಮದ್ ಎಂಬ ಬ್ಯಾನರ್ ಕಲಬುರಗಿಗೂ ಕಾಲಿಟ್ಟಿದೆ.
ವೈದ್ಯಕೀಯ ಶಿಕ್ಷಣ ಸಚಿವರ ತವರು ಕ್ಷೇತ್ರವಾದ ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಐ ಲವ್ ಬ್ಯಾನರ್ ಕಂಡು ಬಂದಿದ್ದು, ವಿವಿಧ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಐ ಲವ್ ಮೊಹಮದ್ ಬ್ಯಾನರ್ ಅಳವಡಿಕೆ ಮಾಡಿದ್ದರಿಂದ ಕೆಲ ಹಿಂದೂ ಸಂಘಟನೆಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದ್ದು, ಹಿಂದೂ ಸಮಾಜವನ್ನು ಏನು ಮಾಡಲು ಹೊರಟಿದ್ದಿರಾ ಎಂದು ಹಿಂದೂ ಸಂಘಟನೆಗಳು ಕಿಡಿಕಾರಿವೆ. ಬ್ಯಾನರ್ ಅಳವಡಿಕೆ ವಿಚಾರ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸ್ ಇಲಾಖೆ, ತಕ್ಷಣವೇ ಐ ಲವ್ ಮೊಹಮದ್ ಬ್ಯಾನರ್ ತೆರವು ಮಾಡಿದೆ.