ಬೆಂಗಳೂರು: 26 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ, ರಾಜ್ಯದಲ್ಲಿ ನಾಳೆ ವರುಣನ ಆರ್ಭಟ ಮುಂದುವರಿಯಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟ, ಹಳೆ ಮೈಸೂರು, ಕರಾವಳಿ ಮತ್ತು ಘಟ್ಟ ಪ್ರದೇಶ ಸೇರಿದಂತೆ ವಿವಿಧೆಡೆ ಉತ್ತಮ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ ?
ಉತ್ತರ ಕರ್ನಾಟಕದ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಹಾಸನ, ಮಂಡ್ಯ ಭಾಗದಲ್ಲೂ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರದಲ್ಲಿ ಒಣಹವೆ ಅಥವಾ ಮೋಡ ಕವಿದ ವಾತಾವಣರ ಕಂಡುಬರುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಶೇಕಡಾ 86 ರಿಂದ 100ರಷ್ಟು ಮಳೆ ಆಗಬಹುದೆಂದು ಅಂದಾಜಿಸಲಾಗಿದೆ, 7-18 ಮಿ.ಮೀ ಮಳೆಯಾಗುವ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ 14-18 ಕಿ.ಮೀ ನಷ್ಟು ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದೆ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.