ಕಲಬುರಗಿ: ಆಧುನಿಕತೆಯ ಒತ್ತಡದ ಬದುಕಿನಲ್ಲಿ ಮನುಷ್ಯನಿಗೆ ವಿವಿಧ ರೀತಿಯ ಹೊಸ-ಹೊಸ ಕಾಯಿಲೆಗಳು ಕಂಡುಬರುತ್ತಿವೆ. ಇದಲ್ಲದೆ ಅಪಘಾತ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆ ಮಾಡುವುದು ಅಗತ್ಯವಾಗಿದೆ. ಆಗ ಅರವಳಿಕೆ ಅಥವಾ ಅನಸ್ತೇಷಿಯಾ ಮಾಡಿ, ಮುಂದಿನ ಚಿಕಿತ್ಸೆ ಮಾಡುವಲ್ಲಿ ಇದರ ಪಾತ್ರ ಪ್ರಮುಖವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು.
ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ವಿಶ್ವ ಅನಸ್ತೇಷಿಯಾ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಅಮೇರಿಕಾದ ದಂತವೈದ್ಯ ವಿಲಿಯಂ ಥಾಮಸ್ ಅವರು ಅ.16, 1846ರಲ್ಲಿ ಪ್ರಥಮ ಬಾರಿಗೆ ಅನಸ್ತೇಷಿಯಾವನ್ನು ಪ್ರಯೋಗಿಸಿದರು. ಇದರ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಮೊದಲ ಬಾರಿಗೆ ಇದನ್ನು ಬಳಸಿದವರು ಶುಶ್ರುತ್ ಅವರಾಗಿದ್ದಾರೆ. ಅನಸ್ತೇಷಿಯಾದಿಂದ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಅನಕೂಲವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ, ಆರೋಗ್ಯ ಸಿಬ್ಬಂದಿಗಳಾದ ಜಗನಾಥ ಗುತ್ತೇದಾರ, ಗುರುರಾಜ ಕೈನೂರ್, ನಾಗೇಶ್ವರಿ ಮುಗಳಿವಾಡಿ, ಮಂಗಲಾ ಚಂದಾಪುರೆ, ಸಂಗಮ್ಮ ಅತನೂರ, ರೇಷ್ಮಾ ನಕ್ಕುಂದಿ, ಗಂಗಾಜ್ಯೋತಿ ಗಂಜಿ, ಅರ್ಚನಾ ಸಿಂಗೆ, ನಾಗಮ್ಮ ಚಿಂಚೋಳಿ ಸೇರಿದಂತೆ ಅನೇಕರು ಇದ್ದರು.