ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಸಿ ಚಿತ್ತಾಪುರ ಬಂದ್

ಪಟ್ಟಣ

ಚಿತ್ತಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್
ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವ ಪ್ರಿಯಾಂಕ್
ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ
ಹಿನ್ನೆಲೆಯಲ್ಲಿ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಬೆನ್ನಲ್ಲೇ ಸಚಿವ ಖರ್ಗೆ ಅವರನ್ನು ಬೆಂಬಲಿಸಿ, ಕಾಂಗ್ರೆಸ್ ಮುಖಂಡರು ಚಿತ್ತಾಪುರ ಬಂದ್ ಮಾಡಲಾಯಿತು, ಚಿತ್ತಾಪುರ ಬಂದ್’ಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. ,

ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರೆ ನೀಡಿದ್ದ ಬಂದ್ ಕರೆಗೆ ಉತ್ತಮ ಸ್ಪಂದನೆ ದೊರಕಿದೆ. ಚಿತ್ತಾಪುರ ಪಟ್ಟಣದಲ್ಲಿರುವ ಬಹುತೇಕ ಅಂಗಡಿಗಳು ಸ್ವಯಂಪ್ರೇರಿತವಾಗಿ ಮುಚ್ಚಿದ್ದವು. ಅಲ್ಲದೆ ಯಾವುದೆ ಬಸ್ ಗಳು ರಸ್ತೆಗೆ ಇಳಿಯಲಿಲ್ಲ.

ಬಂದ್‌ ಕರೆ ನಿಮಿತ್ತ ಚಿತ್ತಾಪುರ ಪಟ್ಟಣದ ಚಿತ್ತಾಶಾಹವಲಿ
ಚೌಕ್‌ನಿಂದ ಆರಂಭವಾದ ಪ್ರತಿಭಟನೆ ಜನತಾ ಚೌಕ
ಭುವನೇಶ್ವರಿ ವೃತ್ತ, ಡಾ. ಅಂಬೇಡ್ಕರ್ ವೃತ್ತ ಬಸ್ ನಿಲ್ದಾಣ ರಸ್ತೆ ಬಸವೇಶ್ವರ ವೃತ್ತದ ಮೂಲಕ ಹಾದು ಹೋಗಿ ಕೊನೆಗೆ
ಮಾನವ ಸರಪಳಿ ನಿರ್ಮಿಸಲಾಯಿತು. ಪಟ್ಟಣದ ಹಲವೆಡೆ
ಟೈ‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ
ಆಕ್ರೋಶವನ್ನು ಹೊರಹಾಕಿದರು.

ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮತ್ತು ಕಾಂಗ್ರೆಸ್ ಮುಖಂಡರು ಮನವಿ ಪತ್ರ ಸಲ್ಲಿಸಿದರು‌.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಕಾಂಗ್ರೆಸ್ ಮುಖಂಡರಾದ ರಮೇಶ್ ಮರಗೋಳ, ಸುನೀಲ್ ದೊಡ್ಡಮನಿ, ಶಿವರುದ್ರ ಭೀಣಿ, ಮುಕ್ತಾರ್ ಪಟೇಲ್, ನಾಗಯ್ಯ ಗುತ್ತೇದಾರ ಕರದಾಳ, ಮಲ್ಲಿಕಾರ್ಜುನ ಬೆಣ್ಣೂರಕರ್, ಸಾಯಬಣ್ಣ ಕಾಶಿ, ಜಗದೀಶ್ ಚವ್ಹಾಣ, ಸಂಜಯ್ ಬುಳಕರ್ ಸೇರಿದಂತೆ ನೂರಾರು ಕಾಂಗ್ರೆಸ್ ಯುವ ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *