ದೀಪಾವಳಿ ಗಿಫ್ಟ್‌: ದುಬಾರಿ ಕಾರುಗಳನ್ನು ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ

ರಾಷ್ಟೀಯ

ಚಂಡೀಗಢ: ಉದ್ಯೋಗಿಗಳ ಕಾರ್ಯಗಳನ್ನು ಗುರುತಿಸುವ ವಿನೂತನ ಮಾದರಿಯನ್ನು ಕಳೆದ ಕೆಲ ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಔಷಧ ತಯಾರಿಕಾ ಕಂಪನಿಯ ಮಾಲೀಕ ಎಂ.ಕೆ ಭಾಟಿಯಾ, ಈ ದೀಪಾವಳಿಗೂ ಕಂಪನಿ ನೌಕರರಿಗೆ ಭರ್ಜರಿ ಉಡುಗೊರೆಯನ್ನು ನೀಡಿದ್ದಾರೆ. ಬೋನಸ್, ಸ್ವೀಟ್ ಬದಲಿಗೆ ದುಬಾರಿ ಕಾರುಗಳನ್ನೇ ಉಡುಗೊರೆಯಾಗಿ ನೀಡಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ.

ಹರಿಯಾಣದ ಖ್ಯಾತ ಉದ್ಯಮಿ ಹಾಗೂ ಮಿಟ್ಸ್ ಕಾರ್ಟ್ ಸಂಸ್ಥೆಯ ಮಾಲೀಕ ಎಂ.ಕೆ ಭಾಟಿಯಾ ನೌಕರರಿಗೆ ಈ ಬಾರಿಯೂ ದುಬಾರಿ ಕಾರು ಗಿಫ್ಟ್ ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ 12 ಜನ ನೌಕರರಿಗೆ ವಿವಿಧ ಬಣ್ಣದ ಟಾಟಾ ಪಂಚ್ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈವರೆಗೂ 51 ನೌಕರರಿಗೆ ಎಸ್‌ಯುವಿ ಕಾರುಗಳ ಉಡುಗೊರೆ ನೀಡಿದ್ದಾರೆ. ಉದ್ಯಮದೊಂದಿಗೆ ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿರುವ ಭಾಟಿಯಾ ಹರಿಯಾಣದ ಪಂಚಕುಲಾದಲ್ಲಿ ಮಿಟ್ಸ್‌ ಕಾರ್ಟ್‌ ಎಂಬ ಕಂಪನಿ ಹೊಂದಿದ್ದಾರೆ. ಪ್ರತಿ ಸಲ ದೀಪಾವಳಿ ಸಂದರ್ಭದಲ್ಲಿ ತಮ್ಮ ಉದ್ಯೋಗಿಗಳಿಗೆ ಭರ್ಜರಿ ಉಡುಗೊರೆ ನೀಡುತ್ತಾ ಬಂದಿದ್ದಾರೆ.

ಅದೆ ರೀತಿ ಈ ಬಾರಿಯೂ ಉದ್ಯೋಗಿಗಳನ್ನು ಕಾರ್ ಶೋರೂಮ್‌ಗೆ ಕರೆದೊಯ್ದು ಹೊಸ ಕಾರುಗಳನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಕಾರು ಸ್ವೀಕರಿಸಿದ ಸಿಬ್ಬಂದಿ ಶೋರೂಮ್‌ನಿಂದ ಕಚೇರಿವರೆಗೂ ಕಾರು ಓಡಿಸುತ್ತಾ ಬಂದು ಸಂಭ್ರಮಿಸಿದ್ದಾರೆ.

Leave a Reply

Your email address will not be published. Required fields are marked *