ವಾಡಿ: ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ಕಚೇರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯರು ಹಾಗೂ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ ನಮೋಶಿ ಅವರನ್ನು ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಸನ್ಮಾನಿಸಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ, ಮುಖಂಡರಾದ ಶರಣಗೌಡ ಚಾಮನೂರ, ಹರಿ ಗಲಾಂಡೆ, ಶಿವಶಂಕರ ಕಾಶೆಟ್ಟಿ, ಶಿವರಾಮ ಜಾಧವ, ರಾಜಶೇಖರ ದೂಪದ, ಮಲ್ಲಿಕಾರ್ಜುನ ಸಾತಖೇಡ, ಅಯ್ಯಣ್ಣ ದಂಡೋತಿ, ಪ್ರೇಮ ರಾಠೋಡ, ಯಂಕಮ್ಮ ಗೌಡಗಾಂವ, ನಿರ್ಮಲ ಇಂಡಿ, ಉಮಾಭಾಯಿ ಗೌಳಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.