ನಟ ಶಿವರಾಜ್‌ಕುಮಾರ್ ಹಾಗೂ ಸಿಂಪಲ್ ಸುನಿ ನಿರ್ದೇಶನದ `ಮನಮೋಹಕ’ ಸಿನಿಮಾ ಸುಮಾರು 10 ವರ್ಷಗಳ ಹಿಂದೆ ಸೆಟ್ಟೇರಬೇಕಿತ್ತು. ಆ ಸಿನಿಮಾಗಾಗಿ ಫೋಟೋ ಶೂಟ್ ಕೂಡಾ ಮಾಡಲಾಗಿತ್ತು. ನವಿರಾದ ಪ್ರೇಮಕಥೆಯುಳ್ಳ ಮನಮೋಹಕ ಸಿನಿಮಾದ ಕಥೆ ಕೇಳಿ ಶಿವಣ್ಣ ತುಂಬಾನೇ ಖುಷಿಯಿಂದ ಒಪ್ಪಿಕೊಂಡಿದ್ದರು. ಆದರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯಿತು.
ಮನಮೋಹಕ ಸಿನಿಮಾದ ವಿಶೇಷ ಪಾತ್ರದಲ್ಲಿ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನು ಕರೆತರಲು ಕೂಡಾ ಪ್ಲ್ಯಾನ್ ಮಾಡಲಾಗಿತ್ತಂತೆ. ಸುಮಾರು 10 ವರ್ಷಗಳಾದರೂ ಆ ಸಿನಿಮಾದ ಇಂಚಿಂಚೂ ಘಟನೆಗಳನ್ನು, ನೆನಪುಗಳನ್ನು ಇತ್ತೀಚೆಗೆ ನಿರ್ದೇಶಕ ಸಿಂಪಲ್ ಸುನಿ ಶಿವರಾಜ್‌ಕುಮಾರ್ ಮುಂದೆ ಹಂಚಿಕೊಂಡಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ `ಗತವೈಭವ’ ಸಿನಿಮಾದ ಹಾಡೊಂದರ ರಿಲೀಸ್ ಇವೆಂಟ್‌ನಲ್ಲಿ ಈ ಬಗ್ಗೆ ನಿರ್ದೇಶಕ ಸುನಿ ಮಾತನಾಡಿದ್ದಾರೆ.
ಮನಮೋಹಕ ಸಿನಿಮಾದ ಬಗ್ಗೆ ನಿರ್ದೇಶಕ ಸುನಿ ಮಾತಾಡೋಕು ಕಾರಣ ಇದೆ. ಸುನಿ ನಿರ್ದೇಶನದ ಗತವೈಭವ’ ಚಿತ್ರದ ಹಾಡು ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ ಶಿವಣ್ಣನ ಮುಂದೆ ಹಳೆ ನೆನಪು ಬಿಚ್ಚಿಟ್ಟಿದ್ದಾರೆ. ಬಳಿಕ ಮಾತಾಡಿದ ಶಿವಣ್ಣ ಮನಮೋಹಕ’ ಸಿನಿಮಾ ಖಂಡಿತಾ ಆಗುತ್ತೆ. ಟೈಂ ಕೂಡಿ ಬರಬೇಕು. ಸುನಿ ಜೊತೆ ಸಿನಿಮಾ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿಂಪಲ್ ಸುನಿಗೆ ಶಿವಣ್ಣ ಅವಕಾಶ ಮಾಡಿಕೊಟ್ಟರೆ ಇಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಬರೋ ನಿರೀಕ್ಷೆಗಳು ಹೆಚ್ಚಾಗಿವೆ.