ಕಲಬುರಗಿ: ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಚಿತ್ತಾಪುರ ಪಟ್ಟಣದ ಆದರ್ಶ ವಿದ್ಯಾಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳು ಅಥ್ಲೆಟಿಕ್ಸ್‌ನ ವಿವಿಧ ಕ್ರೀಡೆಗಳಲ್ಲಿ ವಿಜಯಶಾಲಿಗಳಾಗುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀಶೈಲ ಸರಪಳಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ ಮತ್ತು 10ನೇ ತರಗತಿಯ ಪ್ರಕೃತಿ ಜಿಲ್ಲಾ ಮಟ್ಟದ 3 ಕಿಲೋ ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟ ಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಮೇಲುಸ್ತುವಾರಿ ಸಮಿತಿಯ ಚಂದರ ಚವ್ಹಾಣ, ಸಮಿತಿಯ ಸದಸ್ಯರು, ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.