ವಿಜ್ಞಾನ ಕ್ಷೇತ್ರದಲ್ಲಿ ಬೆಳಕು ಮೂಡಿಸಿದ ರಾಮನ್: ಎಚ್.ಬಿ ಪಾಟೀಲ

ನಗರದ

 ಕಲಬುರಗಿ: ರಾಮನ್ ಅವರು ವಿಜ್ಞಾನ ಕ್ಷೇತ್ರದಲ್ಲಿ ‘ಬೆಳಕು’ ಮೂಡಿಸುವ ಮೂಲಕ ದೇಶದ ಕೀರ್ತಿ ವಿಶ್ವದೆಲ್ಲೆಡೆ ಪಸರಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.‌   

ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಏರ್ಪಡಿಸಿದ್ದ ‘ಸರ್ ಸಿ‌.ವಿ ರಾಮನ್’ರ 137ನೇ ಜನ್ಮ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ್ ಅವರು ‘ಭಾರತ ರತ್ನ’ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾರತದಲ್ಲಿ ವಿಜ್ಞಾನದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ.  ಭಾರತೀಯ ವಿಜ್ಞಾನ ಸಂಸ್ಥೆಯ ಮೊದಲ ಭಾರತೀಯ ನಿರ್ದೇಶಕರಾಗಿದ್ದರು ಎಂದರು.

ಸಂಗೀತದಲ್ಲಿ ಆಸಕ್ತಿ ಹೊಂದಿದ್ದು, ಪಿಟೀಲು ಮತ್ತು ಡ್ರಮ್‌ಗಳಂತಹ ವಾದ್ಯಗಳ ಕಂಪನಗಳ ಬಗ್ಗೆಯೂ ಅಧ್ಯಯನ ಮಾಡಿ ಲೇಖನಗಳನ್ನು ಪ್ರಕಟಿಸಿದ್ದಾರೆ.  ವಿಮಾನ ನಿಲ್ದಾಣಗಳಲ್ಲಿ ಭದ್ರತಾ ಪರಿಶೀಲನೆ, ಜೀವ ರಾಸಾಯನಿಕ ಸಂಯುಕ್ತಗಳ ಅಧ್ಯಯನ ಮುಂತಾದ ಅನೇಕ ಕ್ಷೇತ್ರಗಳಲ್ಲಿ ‘ರಾಮನ್ ಪರಿಣಾಮ’ವನ್ನು  ಬಳಸಲಾಗುತ್ತದೆ ಎಂದರು.   

  ಕಾರ್ಯಕ್ರಮದಲ್ಲಿಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಶಿಕ್ಷಕಿಯರಾದ ಕಾವೇರಿ ಹೌದೆ, ಪೂಜಾ ಹೂಗಾರ, ಮುಸ್ಕಾನ್ ಶೇಖ್, ಸ್ನೇಹಾ ಚೌಹಾಣ ಹಾಗೂ ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *