ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಅಪರಿಚಿತ ಶವ ಪತ್ತೆಯಾಗಿದೆ. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತ ವ್ಯಕ್ತಿಗೆ ಅಂದಾಜು 35-40 ವಯಸ್ಸಾಗಿದೆ, ಗುರುತು ಪತ್ತೆಯಾಗಿಲ್ಲ, ಶವವನ್ನು ಸ್ಥಳೀಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಚಿತ್ತಾಪುರ ಪೊಲೀಸ್ ಠಾಣೆಗೆ ಅಥವಾ ಪಿಎಸ್ಐ ಅವರ ದೂರವಾಣಿ ಸಂಖ್ಯೆ 9480803573 ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.