ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ.
ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 8 ರಿಂದ 19 ರವೆರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ಸಂಬಂಧ ನಿರ್ಣಯ ಕೈಗೊಳ್ಳಲಾಗಿತ್ತು. ಇಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.