Site icon ಸುದ್ದಿ ಸಂಗ್ರಹ

ಕಾರು ಅಪಘಾತ: ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಕಲಬುರಗಿ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMS) ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕೆಎಸ್‌ಎಂಸಿಎಲ್ ಎಂಡಿಯಾಗಿದ್ದ ಮಹಾಂತೇಶ್ ಬೀಳಗಿ ಇನ್ನೋವಾ ಕಾರಿನಲ್ಲಿ ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಅಪಘಾತವಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಾಂತೇಶ್ ಬೀಳಗಿ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 2012 ರ ಕರ್ನಾಟಕ ಕೆಡರ್ ಬ್ಯಾಚ್ ಐಎಎಸ್‌ ಅಧಿಕಾರಿಯಾಗಿದ್ದ ಇವರು ಈ ಮೊದಲು ಬೆಸ್ಕಾಂ ಎಂಡಿಯಾಗಿ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರಿನ ಮೇಕ್ರಿ ಸರ್ಕಲ್‌ ಬಳಿ ಮಹಾಂತೇಶ್ ಬೀಳಗಿ ಪತ್ನಿ, ಮಗಳ ಜೊತೆ ನೆಲೆಸಿದ್ದರು.

Exit mobile version