ಸರ್ಕಾರಿ ಶಾಲೆಗಳ LKG-UKG ಮಕ್ಕಳಿಗೂ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ

ರಾಜ್ಯ

ಬೆಂಗಳೂರು: ಸರ್ಕಾರಿ ಶಾಲೆಗಳ ಎಲ್‌ಕೆಜಿ-ಯುಕೆಜಿ ಮಕ್ಕಳಿಗೂ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

ಡಿಸೆಂಬರ್ 1 ರಿಂದ ಅನ್ವಯವಾಗುವಂತೆ ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಬಾಳೆಹಣ್ಣು ಕೊಡಲಿದೆ. ಬಿಸಿಯೂಟ ಮಾಡುವ ಅಡುಗೆಯವರಿಗೂ ಗೌರವಧನ ನೀಡುವಂತೆ ಆದೇಶದಲ್ಲಿ ಶಿಕ್ಷಣ ಇಲಾಖೆ ಉಲ್ಲೇಸಿದೆ.

ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಮಾರ್ಗಸೂಚಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಈ ಯೋಜನೆಯ ಫಲಾನುಭವಿಗಳೆಂದು ಪರಿಗಣಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಈ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿರುವ ಪಿಎಬಿಯ ಸಭಾ ನಡಾವಳಿಯಲ್ಲಿ ಪೂರ್ವ ಪ್ರಾಥಮಿಕ ತರಗತಿ (ಬಾಲವಾಟಿಕಾಗಳು)ಗಳಲ್ಲಿನ 1,98,270 ಮಕ್ಕಳಿಗೆ ಮಧ್ಯಾಹ್ನ ಉಪಾಹಾರ ನೀಡಲು 2,215 ಲಕ್ಷ ರೂ. ಕೇಂದ್ರದ ಪಾಲಿನ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.

Leave a Reply

Your email address will not be published. Required fields are marked *