ಸುದ್ದಿ ಸಂಗ್ರಹ ಬೆಂಗಳೂರು
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು, ಮಾಜಿ ಸಚಿವರು, ಶಾಸಕರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕಷ್ಟೆ ಅಲ್ಲದೆ ಇಡಿ ನಾಡಿಗೆ ತುಂಬಲಾರದ ನಷ್ಟವಾದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ಸೂಚಿಸಿದ್ದಾರೆ.
ಅವರ ಜೀವನೋತ್ಸಾಹಕ್ಕೆ ಅವರ ವಯಸ್ಸು ಎಂದಿಗೂ ಅಡ್ಡಿಯಾಗಲಿಲ್ಲ, ಅವರ ಸಾರ್ಥಕ ಬದುಕು ಯುವ ಸಮಾಜಕ್ಕೆ ಎಂದಿಗೂ ಮಾದರಿಯಾಗಿರುವಂತಹದ್ದು.
ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಶಾಮನೂರು ಶಿವಶಂಕರಪ್ಪನವರ ಕೊಡುಗೆ ಹಾಗೂ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ವಿಶಿಷ್ಠ ಹೆಜ್ಜೆಗುರುತುಗಳು ಸಮಾಜದ ಭವಿಷ್ಯಕ್ಕಾಗಿ ಕಟ್ಟಿದ ಹಿರಿಮೆ ಅವರದ್ದಾಗಿದೆ.
ಅವರ ಅಗಲಿಕೆಯ ನಷ್ಟವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ, ಸಮಾಜಕ್ಕೆ ಮತ್ತು ಅಪಾರ ಅಭಿಮಾನಿ ವರ್ಗಕ್ಕೆ ಸಿಗುವಂತಾಗಲಿ ಎಂದು ಆಶಿಸುತ್ತೆನೆ ಎಂದು ಸಂತಾಪ ಸೂಚಿಸಿದ್ದಾರೆ.