ಸುದ್ದಿ ಸಂಗ್ರಹ ಶಹಾಬಾದ
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಚುನಾಯಿತ ರಾಜ್ಯ ಕಾರ್ಯಕಾರಿ ಸದಸ್ಯರಿಗೆ, ಜಿಲ್ಲಾ ಪದಾಧಿಕಾರಿಗಳಿಗೆ, ಕಾರ್ಯಕಾರಿ ಸಮಿತಿ ಸದಸ್ಯರಿಗೆ ಡಿ.೨೦ ರಂದು ಶನಿವಾರ ನಗರದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತರಾದ ಲೋಹಿತ ಕಟ್ಟಿ ಮತ್ತು ನಿಂಗಣ್ಣ ಜಂಬಗಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಶಹಾಬಾದ ತಾಲೂಕ ಪತ್ರಕರ್ತರ ವತಿಯಿಂದ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದ್ದು, ರಾವೂರನ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಶಾಸಕ ಬಸವರಾಜ ಮತ್ತಿಮೂಡ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಹಸೀಲ್ದಾರ ನೀಲಪ್ರಭಾ ಬಬಲಾದ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಪೌರಾಯುಕ್ತ ಡಾ.ಕೆ.ಗುರುಲಿಂಗಪ್ಪ, ಕಾಡಾ ಅಧ್ಯಕ್ಷ ಡಾ.ಎಂ.ಎ ರಶೀದ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಜಿಲ್ಲಾ ಕಾರ್ಯದರ್ಶಿ ವಾಸುದೇವ ಚವ್ಹಾಣ ಉಪಸ್ಥಿತರಿರುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಕೆ.ರಮೇಶ ಭಟ್ ವಹಿಸುವರು ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಪತ್ರಕರ್ತರಾದ ಶಿವಕುಮಾರ ಕುಸಾಳೆ, ನಾಗರಾಜ ದಂಡಾವತಿ, ಖಾಜಾ ಪಟೇಲ, ದಾಮೋಧರ ಭಟ್, ಮ.ಮುಸ್ತಾಕ, ಶ್ರೀಪಾದ ಭಟ್ ಇದ್ದರು.