ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಅಗತ್ಯ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ಅಲ್ಪಸಂಖ್ಯಾತರ ಸರ್ವತೋಮುಖ ಬೆಳವಣಿಗೆಗೆ ಸಂವಿಧಾನ, ಕಾನೂನು ಅವರಿಗೆ ಹಕ್ಕುಗಳನ್ನು ನೀಡಿದ್ದು, ಅವುಗಳ ಬಗ್ಗೆ ಜನಜಾಗೃತಿ ಮೂಡಿಸಿ, ಅವುಗಳಿಗೆ ತೊಂದರೆಯಾಗದಂತೆ ಸಂರಕ್ಷಣೆ ಮಾಡಿದರೆ, ಅಲ್ಪಸಂಖ್ಯಾತರ ರಕ್ಷಣೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಹಿಂದ ಜಿಲ್ಲಾ ಗೌರವ ಅಧ್ಯಕ್ಷ ಡಾ.ಸಾಜಿದ್ ಅಲಿ ರಂಜೊಳ್ವಿ ಅಭಿಪ್ರಾಯಪಟ್ಟರು.

ನಗರದ ಹಾಗರಗಾ ರಸ್ತೆಯ ಎಂ.ಬಿ.ಆರ್‌ಸಿಎಂ ಟ್ರೇಡರ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ‘ರಾಷ್ಟ್ರೀಯ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು.

ಅಹಿಂದ ಜಿಲ್ಲಾಧ್ಯಕ್ಷ ಶರಣಪ್ಪ ಪರಿಗೇಡ್ ಮಾತನಾಡಿ, ಅಲ್ಪಸಂಖ್ಯಾತರ ಬಗ್ಗೆ ಕಾಳಜಿ, ಗೌರವ ಅಗತ್ಯ. ಅವರಿಗೆ ದೊರೆಯಬೇಕಾದ ಸೌಲಭ್ಯಗಳು ನೀಡಬೇಕು. ಅವುಗಳ ಸದುಪಯೋಗಪಡಿಸಿಕೊಂಡು ಬೆಳವಣಿಗೆ ಹೊಂದಬೇಕು ಎಂದರು.

ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಅಲ್ಪಸಂಖ್ಯಾತರು ರಾಷ್ಟ್ರದ ಅಭಿವೃದ್ಧಿಗೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಅವರು ಹೊಂದಿರುವ ಮಾತೃಭಾಷೆ, ಲಿಪಿ, ಸಂಸ್ಕೃತಿ, ಪರಂಪರೆಯನ್ನು ಗೌರವಿಸುವುದು, ಉಳಿಸಿ ಬೆಳೆಸುವುದು, ಶಿಕ್ಷಣ ಸೇರಿದಂತೆ ಎಲ್ಲಾ ಕೇತ್ರಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪೂರಕವಾದ ವಾತಾವರಣ ನಿರ್ಮಿಸಿಕೊಡುವ ಮೂಲಕ ಬಹುಸಂಸ್ಕೃತಿ ಗೌರವಿಸಬೇಕಾದದ್ದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ. ವಿಶ್ವಸಂಸ್ಥೆಯು ಡಿಸೆಂಬರ-18, 1992 ರಂದು ಅಲ್ಪಸಂಖ್ಯಾತರ ಹಕ್ಕುಗಳು ಘೋಸಿಸಿತು. ಅದರ ಅಂಗವಾಗಿ ಇದನ್ನು ಆಚರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಶಿವಯೋಗೆಪ್ಪಾ ಎಸ್.ಬಿರಾದಾರ, ಅಸ್ಲಾಂ ಶೇಖ್, ಮೊಹಸಿನ್ ಬಿನಸಾಲೆ, ಡಾ.ಅಬ್ದುಲ್ ಕರೀಮ್, ಕೈಲಾಸ ಹಿಪ್ಪರಗಾ, ಮೊಹಮ್ಮದ್ ಅನ್ವರಸಾಬ್, ಅಬ್ದುಲ್ ಅಜೀಜ್, ವಾಯಜುದ್ದೀನ್ ಪಟೇಲ್, ಮೊಹಮ್ಮದ್ ಜಿಲಾನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *