ಸುದ್ದಿ ಸಂಗ್ರಹ ಚಿತ್ತಾಪುರ
ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಆರತಿ ತುಪ್ಪದ ಅವರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರವಿವಾರ ಮಗುವಿಗೆ ಲಸಿಕೆ ಹಾಕಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ನಮ್ಮ ರಾಷ್ಟ್ರದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆ ಆಗಿದೆ. ಮತ್ತೆ ಪೋಲಿಯೋ ವೈರಸ್‌ನಿಂದ ಅಂಗವೈಕಲ್ಯಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ತಮ್ಮ ನವಜಾತ ಶಿಶುವಿನಿಂದ ಹಿಡಿದು 5 ವರ್ಷದೊಳಗಿನ ಮಕ್ಕಳಿಗೆ ಬೂತ್ ಮಟ್ಟದಲ್ಲಿ ಕರೆತಂದು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವೀರನಾಥ್, ಡಾ.ಶಾಂತಯ್ಯ ಸ್ವಾಮಿ, ಡಾ.ರೆಹೆಮಾನ್, ಡಾ.ಖನೀಜ್ ಫಾತಿಮಾ, ಡಾ.ಅಮೃತಾ, ಅಂಗನವಾಡಿ ಮೇಲ್ವಿಚಾರಕಿ ರಮಾಬಾಯಿ, ರೋಜಾಲಿನ್, ಕಾಳಮ್ಮ ಮಠಪತಿ, ಅನಸುಯ್ಯಾ, ಸುನಂದಾ, ಸುಹಾಸಿನಿ ಸೇರಿದಂತೆ ಆರೋಗ್ಯ ಸಿಬ್ಬಂದಿಗಳು, ತಾಯಂದಿರು ಉಪಸ್ಥಿತರಿದ್ದರು