6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ಜೀವನ ನಡೆಸೋದು ಕಷ್ಟ ಅಂತ ರಾಜೀನಾಮೆ ಕೊಟ್ಟ ವೈದ್ಯ

ರಾಜ್ಯ

ಸುದ್ದಿ ಸಂಗ್ರಹ ಮಂಗಳೂರು
ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸರಿಯಾಗಿ ಸಂಬಳವಾಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ವೈದ್ಯರಾದ ಡಾ.ಕುಲದೀಪ್ ಎಂ.ಡಿ ರಾ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡುವರೆ ವರ್ಷದಿಂದ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೆ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಾಜ್ಯದ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿಗಳಿಗೆ ಸರ್ಕಾರ ಸಂಬಳ ಬಾಕಿ ಉಳಿಸಿಕೊಂಡಿದೆ. ನೌಕರರ ಸಂಬಳದ ವಿಳಂಬದ ಬಗ್ಗೆ ವಿಪಕ್ಷಗಳು ಸರ್ಕಾರವನ್ನು ಎಚ್ಚರಿಸುತ್ತಿವೆ.

Leave a Reply

Your email address will not be published. Required fields are marked *