ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಮುಂದಾದ ಆರೋಗ್ಯ ಇಲಾಖೆ

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಬಿಗ್‌ ಶಾಕ್‌ ಕೊಟ್ಟಿದೆ. ಸಮುದಾಯ ಆರೋಗ್ಯ ಆಸ್ಪತ್ರೆಗಳ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಇಲಾಖೆ ಮುಂದಾಗಿದೆ.

ರಾಜ್ಯದಲ್ಲಿ ಸುಮಾರು 270 ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳು ಇವೆ‌. ಈ ಆಸ್ಪತ್ರೆಗಳಲ್ಲಿ ಬೆಳಗಿನಿಂದ ಸಂಜೆವರೆಗೂ ವೈದ್ಯಕೀಯ ಸೇವೆಗಳು ಸಿಗುತ್ತಿವೆ. ಗ್ರಾಮೀಣ ಭಾಗದ ಜನರಿಗೆ ತುಂಬಾ ಅನುಕೂಲ ಆಗ್ತಿತ್ತು. ಆದರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಡಿಮೆ ಹೆರಿಗೆ ಆಗುತ್ತಿವೆ. 30 ಕ್ಕಿಂತ ಕಡಿಮೆ ಹೆರಿಗೆ ಆಗಿರುವ ಆಸ್ಪತ್ರೆಗಳಲ್ಲಿ ಅನಾಸ್ತೇಶಿಯಾ ವೈದ್ಯರು, ಮಕ್ಕಳ ವೈದ್ಯರು ಮತ್ತು ಹೆರಿಗೆ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಬೇಕು ಎಂದು ನಿರ್ಧರಿಸಲಾಗಿದೆ. ತಾಲೂಕು ಆಸ್ಪತ್ರೆಗಳು 24 ಗಂಟೆಗಳ ಕಾಲ ಸೇವೆ ನೀಡುವುದಕ್ಕೆ ಈ ರೀತಿ ನಿರ್ಧಾರ ಕೈಗೊಳ್ಳಲಾಗಿದೆ.

ಸಮುದಾಯ ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು ಶಿಫ್ಟ್‌ ಮಾಡಿ, ಸಾಮಾನ್ಯ ಖಾಯಿಲೆಗಳಿಗೆ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ‌. ಆದರೆ, ಎಮರ್ಜೆನ್ಸಿ ಹೆರಿಗೆ ಕೇಸ್‌ಗಳು ತಾಲ್ಲೂಕು ಆಸ್ಪತ್ರೆಗೆ ಹೋಗಬೇಕಾಗುತ್ತೆ. ಹೀಗಾಗಿ, ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಆಗುವ ಸಾಧ್ಯತೆ ಇದೆ. ಸರ್ಕಾರ ಹಂತ ಹಂತವಾಗಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಕಡಿತ ಮಾಡಿ ಆಸ್ಪತ್ರೆಗಳನ್ನ ಮುಚ್ಚುವ ಪ್ಲ್ಯಾನ್ ಮಾಡುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ.

Leave a Reply

Your email address will not be published. Required fields are marked *