ಮುಂಬೈ: ನವ ಮುಂಬೈನ ಕಲಾಂಬೋಲಿಯಲ್ಲಿ ಮರಾಠಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯೊಬ್ಬಳು ತನ್ನ 6 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ.
ಮಗಳ ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ ಮಹಿಳೆಯ ಮೇಲೆ ಅನುಮಾನಗೊಂಡ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದರು.
ಉಸಿರುಗಟ್ಟಿದ ಕಾರಣ ಮಗು ಸಾವನ್ನಪ್ಪಿರುವುದು ದೃಢಪಟ್ಟ ಬಳಿಕ ವಿಚಾರಣೆ ವೇಳೆ ತಾಯಿಯೇ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾಳೆ. ಮಾತನಾಡಲು ತೊಂದರೆ ಇದ್ದ ಮಗು ಹೆಚ್ಚಾಗಿ ಹಿಂದಿ ಮಾತನಾಡುತ್ತಿದ್ದುದರಿಂದ ತಾಯಿ ಪದೆ ಪದೆ ಕೋಪಗೊಂಡು ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.