ಕುವೆಂಪು ಸಂದೇಶ ಸಮಾಜಕ್ಕೆ ದಾರಿ: ಶರಣಬಸಪ್ಪ ಕೋಬಾಳ

ನಗರದ

ಸುದ್ದಿ ಸಂಗ್ರಹ ಶಹಾಬಾದ್
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ರಾಷ್ಟಕವಿ ಕುವೆಂಪು ಜಗತ್ತಿಗೆ ಸಾರಿದ ವಿಶ್ವ ಮಾನವ ಸಂದೇಶ ಪರಿಕಲ್ಪನೆಯೂ ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಸಮಾಜ ಸುಧಾರಣೆ ಸಾಧ್ಯ ಎಂದು ಕಸಾಪ ಅಧ್ಯಕ್ಷ ಶರಣಬಸಪ್ಪ ಕೋಬಾಳ ಹೇಳಿದರು.

ನಗರದ ಲಕ್ಷ್ಮಿಗಂಜ ಬಡಾವಣೆಯ ಶ್ರೀಮತಿ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಮಾನವ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಸಋಷಿ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ವೀರಶೈವ ಕೈಗಾರಿಕಾ ಮತ್ತು ವಾಣಿಜ್ಯ ಮಂಡಳಿ ರಾಜ್ಯ ಘಟಕದ ಉಪಾಧ್ಯಕ್ಷ ಅಣವೀರ ಇಂಗಿಶೆಟ್ಟಿ ಮಾತನಾಡಿ, ಕುವೆಂಪು ಅವರು ಜಾತಿ, ಮತ, ಧರ್ಮದ ಗಡಿಗಳನ್ನು ಮೀರಿ ಎಲ್ಲರೂ ಮಾನವರೆ, ಮಾನವೀಯತೆಯೆ ದೊಡ್ಡ ಧರ್ಮ ಎಂಬ ಸಂದೇಶ ಸಾರಿರುವ ರಾಷ್ಟ್ರಕವಿ ಕುವೆಂಪು ಸಾಹಿತ್ಯ ಲೋಕದಲ್ಲಿ ಪ್ರಥಮ ಬಾರಿಗೆ ಜ್ಞಾನಪೀಠ ಪ್ರಶಸ್ತಿ
ಕರುನಾಡಿಗೆ ತಂದುಕೊಟ್ಟಿದ್ದಾರೆ ಎಂದರು.

ಉದ್ಯಮಿ ಶಿವಕುಮಾರ ಇಂಗಿನಶೆಟ್ಟಿ, ಮುಖ್ಯಗುರು ಸವಿತಾ ಬೆಳಗುಂಪಿ, ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ವಾಸುದೇವ ಚವ್ಹಾಣ್ ವೇದಿಕೆ ಮೇಲಿದ್ದರು.

ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಸ್ಥಳೀಯ
ಕನ್ನಡಾಭಿಮಾನಿಗಳು ಪಾಲ್ಗೊಂಡಿದರು.‌

Leave a Reply

Your email address will not be published. Required fields are marked *