ಚಿತ್ತಾಪುರ: ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ‌

ಪಟ್ಟಣದ

ಸುದ್ದಿ ಸಂಗ್ರಹ ಚಿತ್ತಾಪುರ
ತಹಸೀಲ್ದಾರ್ ಕಚೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸೃಜಿಸಿದ 2026ನೇ ಸಾಲಿನ ಕ್ಯಾಲೆಂಡರ್ ಗ್ರೇಡ್- 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್ ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಗುರುವಾರ ಬಿಡುಗಡೆ ಮಾಡಿದರು‌.

ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರ ನಿರ್ದೇಶನದ ಮೇರೆಗೆ ರಾಜ್ಯ ಸಂಘದಿಂದ ತಯಾರಿಸಿದ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ತಾಲೂಕಿನ ಎಲ್ಲಾ ಇಲಾಖೆಗಳ ನೌಕರರಿಗೆ ವಿತರಿಸಲಾಗುವುದು ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹೇಳಿದರು.‌‌

ಇದೆ ಸಂದರ್ಭದಲ್ಲಿ ತಾಲೂಕು ಶಾಖೆ ವತಿಯಿಂದ ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ ಮರತೂರಕರ್ ಅವರಿಗೆ ಹೊಸ ವರ್ಷದ ಶುಭಾಶಯಗಳು ಕೋರಲಾಯಿತು.

ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಸುನೀಲ ಯನಗುಂಟಿಕರ್, ತಾ.ಪಂ ಸಹಾಯಕ ನಿರ್ದೇಶಕ ಸಂಗಾವಿ, ಸಂಘದ ಪದಾಧಿಕಾರಿಗಳಾದ ಪರಶುರಾಮ, ಮಕ್ಸುದ್, ಉದಯಶಂಕರ, ಶಿವಾನಂದ ನಾಲವಾರ, ಸಾಬಣ್ಣ, ಸಿದ್ದಪ್ಪ, ರಮೇಶ್, ಅಮೃತ್ ಕ್ಷೀರಸಾಗರ, ಶರಣಪ್ಪ ಐಕೂರ, ರತನಕುಮಾರ, ಅಂಬಣ್ಣ, ಸುನೀಲ ಚವ್ಹಾಣ, ಜಯಶ್ರೀ, ಬೇಬಿ ಬಿರಾದಾರ, ಪ್ರಕಾಶ‌ ಸೇರಿದಂತೆ ಕಂದಾಯ ಇಲಾಖೆಯ ನೌಕರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *