ಸುದ್ದಿ ಸಂಗ್ರಹ ಶಹಾಬಾದ್
ವಿಜಯಪುರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಪ್ರಾರಂಭಿಸಿಲು ಮತ್ತು ಖಾಸಗಿ ಸಹಭಾಗಿತ್ವ ವಿರೋಧಿಸಿ ಶಾಂತಿಯುತ ಹೋರಾಟ ಮಾಡುತ್ತಿದ್ದ ನಾಯಕರನ್ನು ಬಂಧಿಸಿ ಕ್ರಿಮಿನಲ್ ಕೇಸ್ ದಾಖಲಿಸಿರುವುದು ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಗಣಪತರಾವ ಕೆ ಮಾನೆ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿಗಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಪ್ರಯತ್ನ ಪಡುವುದು ಬಿಟ್ಟು ನ್ಯಾಯಯುತ ಮತ್ತು ಶಾಂತಿಯುತ ಹೋರಾಟ ಮಾಡುತ್ತಿದ್ದ ಬಿ ಭಗವಾನ ರೆಡ್ಡಿ, ಅರವಿಂದ ಕುಲಕರ್ಣಿ, ಅನಿಲ ಹೊಸಮನಿ, ಸಂಗನಬಸವ ಸ್ವಾಮಿ, ಭೋಗೇಶ್ ಸೋಲಾಪುರ್, ಸಿದ್ರಾಮ ಹಳ್ಳೂರ್ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಿರುವ ಪೊಲೀಸ್ ಮತ್ತು ಸರ್ಕಾರದ ಜನ ವಿರೋಧಿ ದಬ್ಬಾಳಿಕೆಯನ್ನು ನಾವು ಉಗ್ರವಾಗಿ ಖಂಡಿಸುತ್ತೆವೆ, ಜನಪರ ಹೋರಾಟವನ್ನು ಹತ್ತಿಕ್ಕುತ್ತಿರುವ ಸರ್ಕಾರದ ವಿರುದ್ಧ ಜನರು ಒಗ್ಗಟ್ಟಿನಿಂದ ಹೊರಾಟಕ್ಕೆ ಮುಂದಾಗಬೇಕು ಎಂದರು.
ಪ್ರತಿಭಟನೆಯಲ್ಲಿ ರಾಘವೇಂದ್ರ ಎಂ.ಜಿ, ಜಗನ್ನಾಥ್ ಎಸ್.ಹೆಚ್, ರಾಜೇಂದ್ರ ಅತನೂರ, ಸಿದ್ದು ಚೌದ್ರಿ, ನೀಲಕಂಠ ಹುಲಿ, ತಿಮ್ಮಯ್ಯ ಮಾನೆ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.