ಶಹಾಬಾದ: ಜ.12ರಂದು ಉಚಿತ ಆರೋಗ್ಯ, ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರ

ನಗರದ

ಸುದ್ದಿ ಸಂಗ್ರಹ ಶಹಾಬಾದ
ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆ, ದಿ.ಸಂತೋಷಕುಮಾರ ಇಂಗಿನಶೆಟ್ಟಿ ಅಭಿಮಾನಿ ಬಳಗ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಜ.12 ರಂದು ಉಚಿತ ಆರೋಗ್ಯ, ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ ನಮೋಶಿ, ರಾಜಾ ಭೀಮಳ್ಳಿ, ಉದಯ ಚಿಂಚೋಳಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿಬಿರದಲ್ಲಿ ನೇತ್ರ, ಕಿವಿ, ಮತ್ತು ಗಂಟಲು ತಜ್ಞರು, ಎಲುಬು- ಮೂಳೆ ತಜ್ಞರು, ಚರ್ಮರೋಗ ತಜ್ಞರು, ಪ್ರಸೂತಿ- ಸ್ರೀರೋಗ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಮಕ್ಕಳ ತಜ್ಞರು ಭಾಗವಹಿಸಿ ಉಚಿತ ತಪಾಸಣೆ, ಚಿಕಿತ್ಸೆ ಮತ್ತು ಅವಶ್ಯಕ ಔಷಧಗಳು ಉಚಿತವಾಗಿ ವಿತರಿಸಲಿದ್ದಾರೆ.

ಮಧುಮೇಹ ಕಾಯಿಲೆಗೆ ಸಂಬಂಧಿಸಿದ ರಕ್ತ ಪರೀಕ್ಷೆ, ಇಸಿಜಿ ಉಚಿತವಾಗಿ ಮಾಡಲಾಗುವದು, ಹೆಚ್ಚಿನ ಚಿಕಿತ್ಸೆಗಾಗಿ ಬಸವೇಶ್ವರ ಆಸ್ಪತ್ರೆಯಲ್ಲಿ ಭರ್ತಿಯಾಗುವ ರೋಗಿಗಳಿಗೆ ಉಚಿತ ಕಣ್ಣೀನ ಪೊರೆಯ ಶಸ್ತ್ರಚಿಕಿತ್ಸೆ ಸೇರಿದಂತೆ ಇನ್ನಿತರ ಶಸ್ತ್ರಚಿಕಿತ್ಸೆ ಆರೋಗ್ಯ ಶಿಬಿರದ ರೋಗಿಗಳಿಗೆ ರಿಯಾಯತಿ ದರದಲ್ಲಿ ಆರೋಗ್ಯ ಸೇವೆ ಬಸವೇಶ್ವರ ಆಸ್ಪತ್ರೆಯಲ್ಲಿ ಒದಗಿಸಲಾಗುವದು. ಅದೆ ದಿನ ರಕ್ತದಾನ ಶಿಬರ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.‌

ಶಹಾಬಾದ ನಗರದ ಸುತ್ತಲಿನ ಗ್ರಾಮಸ್ಥರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಆಸ್ಪತ್ರೆಯ ಸಂಚಾಲಕ ಡಾ.ಕಿರಣ ದೇಶಮುಖ, ಮಹಾದೇವಪ್ಪ ರಾಂಪುರೆ ವ್ಯದ್ಯಕೀಯ ಕಾಲೇಜಿನ ಡೀನ್ ಡಾ.ಶರಣಗೌಡ ಪಾಟೀಲ, ಉಪಡೀನ್ ಡಾ.ವಿಜಯಕುಮಾರ ಕಪ್ಪಕೆರೆ, ಬಸವೇಶ್ವರ ಆಸ್ಪತ್ರೆಯ ಅಧೀಕ್ಷಕ ಡಾ.ಮಲ್ಲಿಕಾರ್ಜುನ ತೆಗನೂರ, ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷ ಕೆ.ರಮೇಶ ಭಟ್, ಪ್ರಧಾನ ಕಾರ್ಯದರ್ಶಿ ಲೋಹಿತ ಕಟ್ಟಿ ಮತ್ತು ಶಿಬಿರ ಸಂಯೋಜಕ ಅಣವೀರ ಇಂಗಿನಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *