ತ್ಯಾಗವೀರ ಲಿಂಗರಾಜ ದೇಸಾಯಿಯವರ ಬಹುಮುಖ ಕೊಡುಗೆ ಅಪಾರ: ಎಚ್.ಬಿ ಪಾಟೀಲ್

ನಗರದ

ಸುದ್ದಿ ಸಂಗ್ರಹ ಕಲಬುರಗಿ
ಈ ನಾಡು ಕಂಡ ಅಪ್ರತಿಮ ದಾನವೀರ ಶಿರಸಂಗಿ ಲಿಂಗರಾಜ ದೇಸಾಯಿಯವರ ತ್ಯಾಗ ಮತ್ತು ಉದಾರ ಮನೋಭಾವ ಸದಾ ಸ್ಮರಣೀಯವಾದದ್ದು. ಕನ್ನಡ ನಾಡಿಗೆ  ಅಪಾರ ಸೇವೆ ಸಲ್ಲಿಸಿ, ಜೀವನವನ್ನೆ ತ್ಯಾಗ ಮಾಡಿದ ದೇಸಾಯಿಯವರ ಸಂಪೂರ್ಣ ಪರಿಚಯ ನಮ್ಮ ನಾಡಿಗೆ ಆಗಬೇಕಿದೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ್ ಹೇಳಿದರು.   

 ನಗರದ ಆಳಂದ ರಸ್ತೆಯ ಶಿವನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ತ್ಯಾಗವೀರ ಲಿಂಗರಾಜ ದೇಸಾಯಿಯವರ 165ನೇ ಜನ್ಮದಿನಾಚರಣೆ’ಯ  ಪುಣ್ಯಸ್ಮರಣೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, ದೇಶದ ಬೆನ್ನೆಲುಬು, ರೈತ ಎಂಬುದನ್ನು ಮನಗೊಂಡಿದ್ದ ಲಿಂಗರಾಜರು, ತಮ್ಮ  150 ಎಕರೆ ಹೊಲದಲ್ಲಿ ಕೃಷಿ ತರಬೇತಿ ಶಾಲೆ ಸ್ಥಾಪಿಸಿ, ಭವ್ಯವಾದ ಹಲವಾರು ಕೆರೆಗಳು ಕಟ್ಟಿಸಿದರು‌. ಭೂ ಅಭಿವೃದ್ಧಿ, ನೀರಾವರಿ ಯೋಜನೆಗಳು ಇವರ ದೂರದೃಷ್ಟಿಗೆ ಹಿಡಿದ ಕನ್ನಡಿ. ಸಾಮಾಜಿಕ ಕ್ರಾಂತಿಕಾರಿಗಳಾದ ಅವರು, ಬಾಲ್ಯ ವಿವಾಹವನ್ನು ವಿರೋಧಿಸಿದರು.

ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಲಿಂಗರಾಜರು ಕೈಗೊಂಡ ಯೋಜನೆಗಳು ಇಂದಿಗೂ ಪ್ರಚಲಿತವಿದ್ದು, ಕೃಷಿ ಮತ್ತು ನೀರಾವರಿ ಬಗೆಗಿನ ಕಾಳಜಿ, ರೈತಪರ ನಿಲುವು, ಶಿಕ್ಷಣ ಮತ್ತು ಸಮಾಜದ ಒಲವುಗಳು ಅವರೊಳಗಿನ ಚುರುಕಿನ ಕ್ರಿಯಾಶೀಲತೆ ಪ್ರದರ್ಶನಗೊಳಿಸುವಂತಹವಾಗಿವೆ ಎಂದರು. 

     ದೇಸಾಯಿಯವರು ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಸದಾ ಸಾಮಾಜಿಕ ಚಿಂತನೆಯಲ್ಲಿದ್ದ ಇವರು ಸಮಾಜದ ಸಂಘಟನೆಗೆ ಹಲವಾರು ಯೋಜಿತ ದಾನ ದತ್ತಿಗಳನ್ನು ನೀಡಿದ್ದಾರೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ, ಶಾಲೆಯ ಮುಖ್ಯ ಶಿಕ್ಷಕಿ ಚಂಪಾಕಲಾ ನೆಲ್ಲುರೆ, ಶಿಕ್ಷಕಿಯರಾದ ಮಂಜುಳಾ ನರೋಣಾ, ಗೀತಾಂಜಲಿ ಹಡಪದ, ಸೇವಕಿ ಸಿದ್ದಮ್ಮ ಕೌಂಟೆ ಹಾಗೂ ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *