ಸುದ್ದಿ ಸಂಗ್ರಹ ಚಿತ್ತಾಪುರ
ಕಲಬುರಗಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ನೂತನ ಪದಾಧಿಕಾರಿಗಳಲ್ಲಿ ಚಿತ್ತಾಪುರ ಮತಕ್ಷೇತ್ರದ ನಾಲ್ಕು ಜನ ಮುಖಂಡರಿಗೆ ಅವಕಾಶ ನೀಡಲಾಗಿದೆ.
ಬಿಜೆಪಿ ಪಕ್ಷದ ತಾಲೂಕು ಪದಾಧಿಕಾರಿಗಳಾಗಿ, ಜಿಲ್ಲಾ ಪದಾಧಿಕಾರಿಗಳಾಗಿ ಇವರುಗಳು ಈ ಹಿಂದೆ ಕೂಡ ಸೇವೆ ಸಲ್ಲಿಸಿದ್ದಾರೆ.
ಶರಣುಜ್ಯೋತಿ ರಾವೂರ ಜಿಲ್ಲಾ ಉಪಾಧ್ಯಕ್ಷರಾಗಿ, ಬಸವರಾಜ ಬೆಣ್ಣೂರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ, ಗಿರೀಶ್ ಭಜಂತ್ರಿ ಜಿಲ್ಲಾ ಕಾರ್ಯದರ್ಶಿಗಳಾಗಿ, ಚಂದ್ರಶೇಖರ ಪರಸರೆಡ್ಡಿ ಜಿಲ್ಲಾ ವಕ್ತಾರರಾಗಿ ಆಯ್ಕೆ ಮಾಡಲಾಗಿದೆ.
ಜಿಲ್ಲಾ ಪದಾಧಿಕಾರಿಗಳ ಸ್ಥಾನಕ್ಕೆ ಯಾರು ಅರ್ಜಿ ಸಲ್ಲಿಸಿಲ್ಲ. ಇವರ ಕ್ರಿಯಾಶೀಲತೆ ಮತ್ತು ಸಂಘಟನಾ ಚತುರತೆ ಗುರ್ತಿಸಿ ಪಕ್ಷವೇ ಜವಾಬ್ದಾರಿ ನೀಡಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹೇಳಿದ್ದಾರೆ.