ಸುದ್ದಿ ಸಂಗ್ರಹ ಶಹಾಬಾದ್
ಶಾಲೆಗಳಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಿಕ್ಷಣ ಪ್ರೇಮಿ ಅನಿಲ ಜೋಸಫ ಜಾನ ತಿಳಿಸಿದರು.
ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಆಗಮಿಸಿ ಮಾತನಾಡಿದ ಅವರು, ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸುವ ಹಾಗೂ ಪ್ರೋತ್ಸಾಹಿಸುವ ದೃಷ್ಟಿಯಿಂದ ಇಂಥ ಕಾರ್ಯಕ್ರಮಗಳು ಶಾಲೆಯಲ್ಲಿ ಮಾಡುವುದರಿಂದ ಮಕ್ಕಳ ಕಲಿಕಾ ಒತ್ತಡದ ಬದಲು ಸಂತೋಷದಾಯಕ ಚಟುವಟಿಕೆಯಾಗಿರಬೇಕು. ಮಕ್ಕಳಲ್ಲಿ ಅಡಗಿರುವ ಕಲೆ ಮತ್ತು ಸೃಜನಾತ್ಮಕ ಚಿಂತನೆಗಳನ್ನು ಹೊರ ತರಲು ಸಹಕಾರಿಯಾಗಿದೆ. ವೈಜ್ಞಾನಿಕ ಮತ್ತು ವಿಮರ್ಶಾತ್ಮಕ
ಚಿಂತನೆಗಳನ್ನು ಬೆಳೆಸುವದರೊಂದಿಗೆ ಮಕ್ಕಳ ಪತ್ರಿಭೆ ಬೆಳೆಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.
ಶಿಕ್ಷಕಿ ಪುನತಿ ರೇಷ್ಮಾ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯಗುರು ಸವಿತಾ ಬೆಳಗುಂಪಿ, ಸುಧಾರಾಣಿ ಚವ್ಹಾಣ್, ಕಾಳಿಕಾ ಪಾಟೀಲ್, ಆರತಿ ವೆಂಕಟೇಶ, ಸುಜಾತ ಕುಂಬಾರ ಮತ್ತು ಸಂಜನಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಮಹೇಬೂಬಬಿ ನಿರೂಪಿಸಿದರು.