ಕಲಬುರಗಿ: ಜ.21, 22 ರಂದು ಸರಕಾರಿ ನೌಕರರ ಕ್ರೀಡಾಕೂಟ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜ.21 ಮತ್ತು 22 ರಂದು ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.‌

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಕ್ರೀಡಾಕೂಟವನ್ನು ಐಟಿ- ಬಿಟಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು ಮತ್ತು ನಿಗಮ ಮಂಡಳಿ ಅಧ್ಯಕ್ಷರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜನೆವರಿ-21 ರಂದು ನಿಗದಿಪಡಿಸಿರುವ ಸ್ಪರ್ದೆಗಳು ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಡೆಯಲಿದ್ದು, 22 ರಂದು ನಡೆಯುವ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಕನ್ನಡ ಭವನದಲ್ಲಿ ನಡೆಯಲಿವೆ.

ಕ್ರೀಡಾಕೂಟದಲ್ಲಿ ಭಾಗವಹಿಸುವ ಸರಕಾರಿ ನೌಕರರಿಗೆ ಜಿಲ್ಲಾಧಿಕಾರಿಗಳು ಒಒಡಿ ಸೌಲಭ್ಯ ಮಂಜೂರು ಮಾಡಿದ್ದಾರೆ. ಇದಕ್ಕಾಗಿ ಆನ್-ಲೈನ್ ಮೂಲಕ ನೊಂದಣಿ ಮಾಡಿಕೊಂಡ ನೌಕರರು 21 ರಂದು ಬೆಳಿಗ್ಗೆ 9 ರಿಂದ 10ರ ವರೆಗೆ ತಮ್ಮ ಇಲಾಖಾ ಗುರುತಿನ ಚೀಟಿಯೊಂದಿಗೆ ಹಾಜರಾದ ಕ್ರೀಡಾಪಟುಗಳಿಗೆ ಟೀ-ಶರ್ಟ್ ಮತ್ತು ಕ್ಯಾಪ್ ವಿತರಣೆ ಮಾಡಲಾಗುವದು ಎಂದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಸುರೇಶ ಶರ್ಮಾ, ಮಹೇಶ ಹೂಗಾರ, ಶ್ರೀಮಂತ ಪಟ್ಟೇದಾರ, ಧರ್ಮರಾಯ ಜವಳಿ, ಚಂದ್ರಕಾಂತ ಏರಿ, ಎಂ.ಬಿ ಪಾಟೀಲ, ಸುರೇಶ ವಗ್ಗೆ, ನಿಜಿಲಿಂಗಪ್ಪ ಕೋರಳ್ಳಿ ಮತ್ತು ಸಿದ್ದಲಿಂಗಯ್ಯ ಮಠಪತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *